ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಳ ಲೆಕ್ಕ ಆರಂಭವಾಗಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ಭಾನುವಾರ ಸಭೆ ನಡೆಸುತ್ತಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸುತ್ತಿದೆ.

ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಸೇರಿದಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಂಸದ ಅನಂತಕುಮಾರ್, ಪೀಯೂಷ್ ಗೋಯಲ್, ಸಂತೋಷ್ ಹಾಗೂ ಸಮಿತಿ ಸದಸ್ಯರು ಹಾಜರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.