ಬುಧವಾರ, ಆಗಸ್ಟ್ 5, 2020
21 °C

ನಿವೃತ್ತ ಕರ್ನಲ್ ಎಂ.ಬಿ. ರವೀಂದ್ರನಾಥ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿವೃತ್ತ ಕರ್ನಲ್ ಎಂ.ಬಿ. ರವೀಂದ್ರನಾಥ್ ನಿಧನ

ಮಲೇಬೆನ್ನೂರು: ಸಮೀಪದ ಹೊಳೆಸಿರಿಗೆರೆ ನಿವಾಸಿ, ನಿವೃತ್ತ ಕರ್ನಲ್ ಎಂ.ಬಿ. ರವೀಂದ್ರನಾಥ್ (59) ಭಾನುವಾರ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ರವೀಂದ್ರನಾಥ್‌ ಅವರಿಗೆ ‘ವೀರಚಕ್ರ’ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದರು.

ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ಮಾಗೋಡ ಲೇಸರ್ ಮಷಿನಿಂಗ್ ಸೆಂಟರ್ ನಡೆಸುತ್ತಿದ್ದರು.

ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸೋಮವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬರಗೂರು ಪತ್ನಿ ರಾಜಲಕ್ಷ್ಮಿ ನಿಧನ

ಬೆಂಗಳೂರು: ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಎಸ್‌.ರಾಜಲಕ್ಷ್ಮಿ (66) ಅನಾರೋಗ್ಯದಿಂದ ಭಾನುವಾರ ನಿಧನರಾದರು.

 

ಅವರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ಧನಹಳ್ಳಿಯವರಾದ ಅವರು, ಕನ್ನಡ ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಹೊಂದಿದ್ದರು. ಬರಗೂರರೊಂದಿಗೆ ಅಂತರ್ಜಾತಿ ವಿವಾಹವಾಗಿದ್ದರು. ಅವರ ಸಾಹಿತ್ಯ ಹಾಗೂ ಸಾಮಾಜಿಕ ಕಳಕಳಿಗೆ ಒತ್ತಾಸೆಯಾಗಿದ್ದರು.

‘ನಟ ರಾಜ್‌ಕುಮಾರ್‌ ಪ್ರಭಾವದಿಂದ ರಾಜಲಕ್ಷ್ಮಿ ಅವರು ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದರು. ಎರಡು ಕಣ್ಣುಗಳನ್ನು ಲಯನ್ಸ್‌ ಇಂಟರ್‌ನ್ಯಾಷನಲ್‌ ನೇತ್ರ ಭಂಡಾರ ಸಂಸ್ಥೆಗೆ ದಾನ ಮಾಡಲಾಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದರು.

ಸೋಮವಾರ ಮಧ್ಯಾಹ್ನ 2 ಗಂಟೆಗೆ ಬನಶಂಕರಿ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.