ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ

7
ಉತ್ತರ ಪ್ರದೇಶ: ಆತ್ಮಾಹುತಿಗೆ ಯತ್ನಿಸಿದ ಸಂತ್ರಸ್ತೆ

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ

Published:
Updated:

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿವಾಸದ ಎದುರು ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಭಾನುವಾರ ಆತ್ಮಾಹುತಿಗೆ ಯತ್ನಿಸಿದ್ದಾರೆ. ಬಾಂಗರಮವು ಕ್ಷೇತ್ರದ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಮತ್ತು ಅವರ ಗೂಂಡಾಗಳು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಹಿಂದೆ ಆರೋಪ ಮಾಡಿದ್ದರು.

‘ಶಾಸಕ ಸೆಂಗರ್‌ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಕ್ರಮಕ್ಕೆ ಮುಂದಾದೆ’ ಎಂದು ಉನ್ನಾವ್ ಜಿಲ್ಲೆಯ ಸಂತ್ರಸ್ತೆ ತಿಳಿಸಿದ್ದಾರೆ.

ಸೆಂಗರ್‌ರನ್ನು ಬಂಧಿಸಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮುಖ್ಯಮಂತ್ರಿ ನಿವಾಸದ ಹೊರಗೆ ಧರಣಿ ನಡೆಸುತ್ತಿದ್ದರು. ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿಸುವುದಾಗಿ ಪೊಲೀಸರು ಭರವಸೆ ನೀಡಿದ ನಂತರ ಧರಣಿ ನಿಲ್ಲಿಸಿದ್ದರು.

ಕಠಿಣ ಕ್ರಮಕ್ಕೆ ಸೂಚನೆ: ‘ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉನ್ನಾವ್ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ’ ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ತಿಳಿಸಿದ್ದಾರೆ.

‘ಪೊಲೀಸರಿಗೆ ವಿಷಯ ತಿಳಿಸಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಾಸಕರು ನನ್ನನ್ನು ಬೆದರಿಸಿದ್ದರು’ ಎಂದು ಸಂತ್ರಸ್ತೆ ಹೇಳಿದ್ದಾರೆ.

ಈ ಆರೋಪವನ್ನು ಸೆಂಗರ್‌ ಅಲ್ಲಗಳೆದಿದ್ದಾರೆ. ‘ಇದು ವಿರೋಧ ಪಕ್ಷದವರು ನನ್ನ ಘನತೆ ಹಾಳುಮಾಡಲು ಹೆಣೆದಿರುವ ರಾಜಕೀಯ ಸಂಚು. ಯಾವುದೇ ತನಿಖೆ ಎದುರಿಸಲು ಸಿದ್ಧ’ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry