ಮದ್ಯಪಾನ ನಿಷೇಧಕ್ಕೆ ಆಗ್ರಹ

7

ಮದ್ಯಪಾನ ನಿಷೇಧಕ್ಕೆ ಆಗ್ರಹ

Published:
Updated:

ಗೋಕಾಕ: ‘ಯಾವುದೇ ರಾಜಕೀಯ ಪಕ್ಷಗಳು ಮದ್ಯಪಾನ ನಿಷೇಧಕ್ಕೆ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷ ಸೋಮಶೇಖರ ಮಗದುಮ್ಮ ಹೇಳಿದರು.

ನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಕಾರ್ಯಾಲಯದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.‘ದುಶ್ಚಟ ಮುಕ್ತ ಸಮಾಜ ನಿರ್ಮಿಸುವಂತಹ ವ್ಯಕ್ತಿಗಳಿಗೆ ಮತ ನೀಡುವಂತೆ ಜಾಗೃತಿ ಮೂಡಿಸಲು ಕಾರ್ಯಕರ್ತರು ಮುಂದಾಗಬೇಕು’ ಎಂದರು.

ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ನಾಗಲಿಂಗ ಪೋತದಾರ, ಸದಸ್ಯ ಚಿನ್ನಯ್ಯ ಹಿರೇಮಠ, ಯೋಜನಾಧಿಕಾರಿ ಸುರೇಂದ್ರಕುಮಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry