ಬುಧವಾರ, ಜುಲೈ 15, 2020
22 °C
ಚಿತ್ರದುರ್ಗದಲ್ಲಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ

‘ಪ್ರಾಣಿಗಳಿಗಿರುವ ನಿಯತ್ತು ಅಮಿತ್‌ ಶಾಗೆ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಪ್ರಾಣಿಗಳಿಗಿರುವ ನಿಯತ್ತು ಅಮಿತ್‌ ಶಾಗೆ ಇಲ್ಲ’

ಚಿತ್ರದುರ್ಗ: ಪ್ರಾಣಿಗಳಿಗಿರುವ ನಿಯತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಇಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಹಾವು, ಮುಂಗುಸಿ, ನಾಯಿ ಮತ್ತು ಬೆಕ್ಕುಗಳೆಲ್ಲ ಒಂದಾ

ಗುತ್ತಿವೆ ಎಂಬುದಾಗಿ ವಿರೋಧ ಪಕ್ಷಗಳ ವಿರುದ್ಧ ಮುಂಬೈಯಲ್ಲಿ ಮೊನ್ನೆ ಶಾ ಅವರು ನೀಡಿದ ಹೇಳಿಕೆಗೆ ಇಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಪ್ರತಿಕ್ರಿಯಿಸಿದರು.

‘ಶಾ ಅವರಿಗೆ ಕರ್ನಾಟಕದ ಮೇಲೆ ಅಭಿಮಾನ ಇದ್ದಿದ್ದರೆ ಮಹಾದಾಯಿ ನದಿ ನೀರು ಹಂಚಿಕೆ ಸಮಸ್ಯೆಯನ್ನು ಯಾವಾಗಲೋ ಬಗೆಹರಿಸುತ್ತಿದ್ದರು. ಅಲ್ಲದೆ, ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಕಷ್ಟು ಅನುದಾನದ ಉಡುಗೊರೆ ನೀಡುತ್ತಿದ್ದರು. ಇದ್ಯಾವುದನ್ನೂ ಮಾಡದೆ, ವಿರೋಧ ಪಕ್ಷಗಳ ವಿರುದ್ಧ ಮಾತನಾಡುವುದು ಎಷ್ಟು ಸರಿ’ ಎಂದು ಮಧು ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.