ಶನಿವಾರ, ಆಗಸ್ಟ್ 8, 2020
22 °C

ಇನ್ನೂ ಎರಡು-ಮೂರು ದಿನದಲ್ಲಿ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ‌: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇನ್ನೂ ಎರಡು-ಮೂರು ದಿನದಲ್ಲಿ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ‌: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಮೊದಲ‌ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ ಎರಡು-ಮೂರು ದಿನದಲ್ಲಿ ಎರಡನೇ ಪಟ್ಟಿ ಬಿಡುಗಡೆ‌ಯಾಗಲಿದೆ. ನಮ್ಮ‌ ಗುರಿ ಮಿಷನ್ 150 ತಲುಪುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು. 

ಸುದ್ದಿಗಾರರೊಂಂದಿಗೆ ಮಾತನಾಡಿದ ಜಗದೀಶ ಶೆಟ್ಟರ್ ಅವರು, ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಗದವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರನ್ನು ಎರಡನೇ ಪಟ್ಟಿಯ ಬಿಡುಗಡೆಯ ಮೂಲಕ  ಸಮಾಧಾನ ಪಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರು ಗೊತ್ತಿಲ್ಲ..! ಅವರ ಭವಿಷ್ಯವೇ ಅತಂತ್ರವಾಗಿದೆ‌ ಕಿಡಿಕಾರಿದರು. 

ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ, ವರುಣಾ ಬಾದಾಮಿ, ಗಂಗಾವತಿ ಹೀಗೆ ನಾನಾ ಕ್ಷೇತ್ರಗಳನ್ನು ಹುಡುಕಿಕೊಂಡು ಓಡಾಡುತ್ತಿದ್ದಾರೆ. ಎಲ್ಲಿಯೂ ಅವರಿಗೆ ಗೆಲ್ಲುವ ಭರವಸೆ ಮೂಡುತ್ತಿಲ್ಲ. ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ ಎಂದು ಹೇಳಿದರು. 

ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡಿದ ಬಳಿಕ ಬಿಜೆಪಿ ಶಕ್ತಿ ಮತ್ತಷ್ಟು ವೃದ್ಧಿಸಲಿದೆ. ಜೆಡಿಎಸ್ ಕಾಂಗ್ರೆಸ್ ನ ಬಿ ಟೀಂ. ಅದನ್ನು ಕಾಂಗ್ರೆಸ್ ಅಧ್ಯಕ್ಷ  ರಾಹುಲ್  ಗಾಂಧಿ ಉಲ್ಟಾ ಹೇಳಿದ್ದಾರೆ. ಸದನದಲ್ಲಿ ಜೆಡಿಎಸ್ ಎಂದಿಗೂ ಕಾಂಗ್ರೆಸ್ ವಿರುದ್ಧ ಮಾತನಾಡಿಲ್ಲ ಎಂದು ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.