ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

7

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Published:
Updated:
ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ನಾಯಕರು ರಾಜಧಾನಿ ದೆಹಲಿಯಲ್ಲಿನ ರಾಜ್‌ಘಾಟ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸಮಾಜದ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಧಕ್ಕೆ ತರುತ್ತಿದೆ ಹಾಗೂ ಅವರು ಸಮಾಜವನ್ನು ವಿಭಜಿಸಲು ಭಯಸುತ್ತಿದ್ದಾರೆ ಎಂದು ಆರ್‌.ಎಸ್‌. ಸರ್ಜೇವಾಲ ಆಪಾದಿಸಿದ್ದಾರೆ.

ಆದ್ದರಿಂದ, ಇಂಥಹ ಸರ್ಕಾರದ ವಿರುದ್ಧ ಹೋರಾಡುವುದು ಕಾಂಗ್ರೆಸ್‌ನ ಕರ್ತವ್ಯ. ನಾವು ಒಟ್ಟಾಗಿ ಸೇರಿದ್ದೇವೆ. ಕಾಂಗ್ರೆಸ್‌ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಶೀಲಾ ದೀಕ್ಷಿತ್, ಅಶೋಕ್ ಗೆಹ್ಲೋಟ್‌, ಅಜಯ್ ಮಾಕನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry