ಶನಿವಾರ, ಡಿಸೆಂಬರ್ 14, 2019
20 °C

ಬಡ್ತಿ ಶಿಫಾರಸು ತಡೆ ಸಾಧ್ಯವೇ: ಪ್ರಸಾದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡ್ತಿ ಶಿಫಾರಸು ತಡೆ ಸಾಧ್ಯವೇ: ಪ್ರಸಾದ್

ನವದೆಹಲಿ: ‘ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನ್ಯಾಯಾಧೀಶರೊಬ್ಬರಿಗೆ ನೀಡಿದ ಬಡ್ತಿ ಶಿಫಾರಸನ್ನು ಅವರ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಮಹಿಳಾ ನ್ಯಾಯಮೂರ್ತಿಯೊಬ್ಬರು ನ್ಯಾಯಬದ್ಧ ರೀತಿಯಲ್ಲಿ ಇತ್ಯರ್ಥಪಡಿಸುವವರೆಗೆ ತಡೆ ಹಿಡಿಯಲು ಸಾಧ್ಯವೇ’ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರನ್ನು ಕೇಳಿದ್ದಾರೆ.

‘ಲೈಂಗಿಕ ಕಿರುಕುಳದಂತಹ ಸೂಕ್ಷ್ಮ ಪ್ರಕರಣದಲ್ಲಿ ಗೋಪ್ಯ ವಿಚಾರಣೆ ನಡೆಸಿದರೆ ಸಾಕೇ? ಲೈಂಗಿಕ ಕಿರುಕುಳ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ರೂಪಿಸಿದ ವಿಶಾಖಾ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸದೆ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯೇ ತನಿಖೆ ನಡೆಸಿದರೂ ಅದು ಸರಿಯೇ’ ಎಂಬ ಪ್ರಶ್ನೆಗಳನ್ನು ಪತ್ರದಲ್ಲಿ ಪ್ರಸಾದ್‌ ಕೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಜೆ. ಚಲಮೇಶ್ವರ್‌ ಅವರು ಮುಖ್ಯ ನ್ಯಾಯಮೂರ್ತಿಗೆ ಇತ್ತೀಚೆಗೆ ಪತ್ರ ಬರೆದು ನ್ಯಾಯಾಂಗದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ನ್ಯಾಯಾಧೀಶ ಪಿ. ಕೃಷ್ಣಭಟ್‌ ಅವರಿಗೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನೀಡಿದ್ದ ಶಿಫಾರಸನ್ನು ಸರ್ಕಾರ ತಡೆ ಹಿಡಿದಿದೆ ಎಂದು ಆರೋಪಿಸಿದ್ದರು.

ಚಲಮೇಶ್ವರ್‌ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಪ್ರಸಾದ್‌ ಅವರು ಈ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)