5 ತಪಾಸಣಾ ಕೇಂದ್ರ ಸ್ಥಾಪನೆ

7

5 ತಪಾಸಣಾ ಕೇಂದ್ರ ಸ್ಥಾಪನೆ

Published:
Updated:

ಹೊಸಕೋಟೆ: ಚುನಾವಣಾ ಅಕ್ರಮಗಳನ್ನು ತಡೆಗಟ್ಟುವುದಕ್ಕಾಗಿ ತಾಲ್ಲೂಕಿನಲ್ಲಿ 5 ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಚುನಾವಣಾಧಿಕಾರಿ ಎ.ದೇವರಾಜು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಶಾಂತಿಯುತ ಹಾಗೂ ಅಕ್ರಮಕ್ಕೆ ಅವಕಾಶ ಇಲ್ಲದಂತೆ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡಲು ಹಣ, ಮದ್ಯ, ಉಡುಗೊರೆ ನೀಡುವುದು ಸಾಮಾನ್ಯ. ಆದರೆ, ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳ ವೀಕ್ಷಣೆಗೆ, ಅಭ್ಯರ್ಥಿಗಳ ಖರ್ಚು–ವೆಚ್ಚ ದಾಖಲಿಸಿಕೊಳ್ಳಲು ತಂಡಗಳನ್ನು ರಚಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ನಿಯಂತ್ರಣ ಕೊಠಡಿ ಸಂಖ್ಯೆ 080–27931005ಕ್ಕೆ ಕರೆ ಮಾಡಬಹುದು. ಇದು ಚುನಾವಣೆಯ ಸಹಾಯ ಕೇಂದ್ರವಾಗಿಯೂ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry