ಮಂಗಳವಾರ, ಆಗಸ್ಟ್ 11, 2020
26 °C

ಜಂಟಿ ಮುಖ್ಯಚುನಾವಣಾಧಿಕಾರಿ ವರ್ಗಾವಣೆಗೆ ಬಿಜೆಪಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಂಟಿ ಮುಖ್ಯಚುನಾವಣಾಧಿಕಾರಿ ವರ್ಗಾವಣೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಜಂಟಿ ಮುಖ್ಯಚುನಾವಣಾಧಿಕಾರಿ ಮಮತಾ ಅವರನ್ನು ವರ್ಗಾವಣೆ ಮಾಡುವಂತೆ ಬಿಜೆಪಿ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

ಮಮತಾ ಈ ಹಿಂದೆ ರಾಮನಗರ ಜಿಲ್ಲಾಧಿಕಾರಿಯಾಗಿದ್ದರು.ಆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಆಪ್ತರಾಗಿದ್ದರು. ಚುನಾವಣೆ ಸಂದರ್ಭದಲ್ಲಿ ಮಾಧ್ಯಮಗಳ ಮೇಲೆ ಪ್ರಭಾವ ಬೀರುವ ಮತ್ತು ಆಯೋಗದ ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ವಿವರಿಸಿದೆ.

ಅಲ್ಲದೆ, ಫ್ಲೈಯಿಂಗ್‌ ಸ್ಕ್ವಾಡ್‌ನ ಜಿ.ಟಿ.ಧನಂಜಯ, ಟಿ.ಸಿ.ರವಿಕುಮಾರ್‌, ಯದುಕೃಷ್ಣ, ಶಿವಣ್ಣ ಮತ್ತು ವಿಚಕ್ಷಣ ತಂಡದ ಅರ್ಪಿತಾ ಅವರನ್ನು ತೆಗೆದು ಹಾಕಬೇಕು. ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.