ಮಾಹಿತಿ ಹಕ್ಕು ಆಯೋಗಕ್ಕೆ ಹೈಕೋರ್ಟ್‌ ನೋಟಿಸ್‌

7

ಮಾಹಿತಿ ಹಕ್ಕು ಆಯೋಗಕ್ಕೆ ಹೈಕೋರ್ಟ್‌ ನೋಟಿಸ್‌

Published:
Updated:

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಿಗೆ ಹೆಚ್ಚುವರಿ ₹ 96 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೋರಿಕೆ ಏನು?: ‘ಮೂರು ವರ್ಷ ಸೇವೆ ಸಲ್ಲಿಸಿದ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಿಗೆ ಹೆಚ್ಚುವರಿ ₹96 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ 2013ರ ಜನವರಿ 5ರಂದು ಆದೇಶಿಸಿದೆ. ಆಯುಕ್ತರ ವಾರ್ಷಿಕ ಪಿಂಚಣಿ ₹4.80 ಲಕ್ಷ ಮೀರುವಂತಿಲ್ಲ. ಇದು ಮಾಹಿತಿ ಹಕ್ಕು ಆಯೋಗದ ನಿಯಮಗಳ ಉಲ್ಲಂಘನೆ. ಆದ್ದರಿಂದ ಈ ಆದೇಶ ರದ್ದುಪಡಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry