ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಧಿಕಾರಕ್ಕೆ ಬಂದರೆ ಪಶು ಆಹಾರ ಘಟಕ ಸ್ಥಾಪನೆ’

Last Updated 9 ಏಪ್ರಿಲ್ 2018, 19:47 IST
ಅಕ್ಷರ ಗಾತ್ರ

ಹೊಸಕೋಟೆ: ‘ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಹೊಸಕೋಟೆ ತಾಲ್ಲೂಕಿನಲ್ಲಿ ಪಶು ಆಹಾರ ಘಟಕ ಸ್ಥಾಪಿಸಲಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಹಾಲು ಉತ್ಪಾದಕರೊಂದಿಗೆ ಸಂವಾದ’ದಲ್ಲಿ ಅವರು ಮಾತನಾಡಿದರು.

‘ಹೊಸಕೋಟೆ ತಾಲ್ಲೂಕು ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುತ್ತಿದೆ. ಆದರೆ, ಮೇವಿನ ಅಭಾವ ಹೆಚ್ಚಾಗಿದೆ. ಪಶು ಆಹಾರ ಸಿಗದೆ ಹಾಲು ಉತ್ಪಾದಕರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ, ಪಶು ಆಹಾರ ಘಟಕ ಸ್ಥಾಪಿಸಬೇಕು’ ಎಂದು ರೈತರೊಬ್ಬರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ಬಿಜೆಪಿಯು ರೈತರು ಹಾಗೂ ಹಾಲು ಉತ್ಪಾದಕರ ಪರವಾಗಿದೆ. ಹೂವಿನ ಬೆಳೆಗಾರರಿಗೆ ನೆರವಾಗಲು ಪುಷ್ಪ ಉದ್ಯಾನವನ್ನು ಪಟ್ಟಣದಲ್ಲಿ ಸ್ಥಾಪಿಸಲಾಗುತ್ತದೆ. ರೈತರ ಪಂಪ್‌ ಸೆಟ್‌ಗಳಿಗೆ ಕನಿಷ್ಠ 12 ಗಂಟೆ ವಿದ್ಯುತ್‌ ನೀಡಲಾಗುತ್ತದೆ’ ಎಂದು ಹೇಳಿದರು.

‘ಪಶುಗಳ ವಿಮೆ ಹಣವನ್ನು ಸರ್ಕಾರವೇ ಭರಿಸಬೇಕು. ಹಾಲಿನ ಕೊಬ್ಬಿನಾಂಶದ ಆಧಾರದ ಮೇಲೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಆದರೆ, ಅದು ನಿಗದಿತ ಸಮಯಕ್ಕೆ ಪಾವತಿಯಾಗುತ್ತಿಲ್ಲ. ಹಸುಗಳಿಗೆ ಶೆಡ್ ನಿರ್ಮಿಸಲು ಸಹಾಯಧನ ನೀಡಬೇಕು. ಹಾಲಿನ ದರವನ್ನು ₹2ಗೆ ಹೆಚ್ಚಿಸಬೇಕು. ಹಾಲು ಉತ್ಪಾದಕರ ಸಂಘಗಳ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು’ ಎಂದು ರೈತರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT