ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್‌ನ ತನ್ನ ಎರಡನೇ ಪಂದ್ಯದಲ್ಲಿ ಮಂಗಳವಾರ ಕಣಕ್ಕೆ ಇಳಿಯಲಿದೆ. ಇಲ್ಲಿನ ಎಂ.ಎ.
ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಈ ತಂಡ ಕೋಲ್ಕತ್ತ ನೈಟ್ ರೈಡರ್ಸ್‌ನ ಸವಾಲು ಎದುರಿಸಲಿದೆ.

ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಎರಡು ವರ್ಷಗಳ ನಂತರ ಮೊದಲ ಬಾರಿ ತವರಿನ ಪ್ರೇಕ್ಷಕರ ಮುಂದೆ ಆಡಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿರುವ ಮಹೇಂದ್ರ ಸಿಂಗ್ ದೋನಿ ಬಳಗದವರು ಮತ್ತೊಂದು ಜಯದ ಭರವಸೆಯಲ್ಲಿದ್ದಾರೆ.

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಒತ್ತಾಯಿಸಿ ಐಪಿಎಲ್ ಪಂದ್ಯಗಳಿಗೆ ಬಹಿಷ್ಕಾರ ಹಾಕಲು ರಾಜಕೀಯ ಸಂಘಟನೆಗಳು ಕರೆ ನೀಡಿವೆ. ಆದರೆ ಸಿಎಸ್‌ಕೆಯ ತವರಿನ ಪಂದ್ಯಗಳು ನಿಗದಿಯಂತೆ ನಡೆಯಲಿವೆ ಎಂದು ಫ್ರಾಂಚೈಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ವಿಶ್ವನಾಥನ್ ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಮಿಂಚಿದ್ದ ಡ್ರೇನ್ ಬ್ರಾವೊ ಮತ್ತು ಅಂಬಟಿ ರಾಯುಡು ಮೇಲೆ ತಂಡ ಭರವಸೆ ಹೊಂದಿದೆ. ಮಹೇಂದ್ರ ಸಿಂಗ್ ದೋನಿ ಲಯ ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಕಣಕ್ಕೆ ಇಳಿಯದೇ ಇದ್ದ ಮುರಳಿ ವಿಜಯ್ ಇಲ್ಲಿ ಅಂತಿಮ 11ರಲ್ಲಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.

ಕೆಕೆಆರ್‌ಗೂ ಜಯದ ಭರವಸೆ: ಮೊದಲ ಪಂದ್ಯದಲ್ಲಿ ಬಲಿಷ್ಠ ಆರ್‌ಸಿಬಿ ಎದುರು ಗೆದ್ದಿರುವ ಕೋಲ್ಕತ್ತ ನೈಟ್ ರೈಡರ್ಸ್ ಕೂಡ ಗೆಲ್ಲುವ ಭರವಸೆಯಲ್ಲಿದೆ.

ಜಾಧವ್ ಅಲಭ್ಯ: ಗಾಯಗೊಂಡಿರುವ ಆಲ್‌ರೌಂಡರ್ ಕೇದಾರ್ ಜಾಧವ್ ಅವರು ಐಪಿಎಲ್‌ನ ಮುಂದಿನ ಪಂದ್ಯಗಳಿಗೆ ಲಭ್ಯ ಇರುವುದಿಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್‌ನ ಕೋಚ್ ಮೈಕೆಲ್ ಹಸ್ಸಿ ತಿಳಿಸಿದ್ದಾರೆ.

ಪಂದ್ಯ ಆರಂಭ: ರಾತ್ರಿ 8.00

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ಕೇದಾರ್ ಜಾಧವ್ ಅಲಭ್ಯ

ಚೆನ್ನೈ: ಗಾಯಗೊಂಡಿರುವ ಆಲ್‌ರೌಂಡರ್ ಕೇದಾರ್ ಜಾಧವ್ ಅವರು ಐಪಿಎಲ್‌ನ ಮುಂದಿನ ಪಂದ್ಯಗಳಿಗೆ ಲಭ್ಯ ಇರುವುದಿಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್‌ನ ಕೋಚ್ ಮೈಕೆಲ್ ಹಸ್ಸಿ ತಿಳಿಸಿದ್ದಾರೆ.

‘ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಪಂದ್ಯದ ಸಂದರ್ಭದಲ್ಲಿ ಅವರು ತೊಡೆ ಸಂದು ಗಾಯಕ್ಕೆ ಒಳಗಾಗಿದ್ದರು. ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿದ್ದು ವಿಶ್ರಾಂತಿ ಬೇಕು ಎಂದು ವೈದ್ಯರು ಸೂಚಿಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.