ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ

ಮಂಗಳವಾರ, ಮಾರ್ಚ್ 26, 2019
33 °C

ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ

Published:
Updated:
ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಚೆಕ್‌ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.

ಮಂಗಳವಾರ ಬೆಳಗ್ಗೆ ಇಲ್ಲಿನ ರಜೌರಿ ವಲಯದಲ್ಲಿರುವ ಚೆಕ್‌ ಪೋಸ್ಟ್‌ಗಳ ಮೇಲೆ ದಾಳಿ ಮಾಡಲಾಗಿದ್ದು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಖಚಿತಪಡಿಸಿದೆ.

ಮೃತ ಯೋಧರನ್ನು ವಿನೋದ್ ಸಿಂಗ್ ಮತ್ತು ಜಾಕಿ ಶರ್ಮಾ ಎಂದು ಗುರುತಿಸಲಾಗಿದೆ. ಈ ಯೋಧರು ರೈಫಲ್‌ ಮನ್‌ಗಳಾಗಿ ಚೆಕ್‌ ಪೋಸ್ಟ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ಘಟನೆಯಲ್ಲಿ ಮತ್ತಿಬ್ಬರು ಭಾರತೀಯ ಯೊಧರಿಗೆ ಗಂಭೀರ ಗಾಯಗಳಾಗಿವೆ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry