ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹೆಸರಿನಲ್ಲಿ ತೊಂದರೆ ಕೊಡುತ್ತಿದ್ದಾರೆ: ಬಿಜೆಪಿ ದೂರು

Last Updated 10 ಏಪ್ರಿಲ್ 2018, 9:10 IST
ಅಕ್ಷರ ಗಾತ್ರ

ಬೆಂಗಳೂರು: 'ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹೆಸರಿನಲ್ಲಿ ತೊಂದರೆ ಕೊಡುತ್ತಿದ್ದಾರೆ' ಎಂದು ಆರೋಪಿಸಿ  ಬಿಜೆಪಿ ಮುಖಂಡರು ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ನೀಡಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾದ
ಪಕ್ಷದ ಮುಖಂಡರು, 'ನಮ್ಮ ಕಾರ್ಯಕರ್ತರು ಮನೆಗಳ ಮೇಲೆ ಹಾಕಿಕೊಂಡಿದ್ದ ಓಂ ಗುರುತು ಇರುವ ಬಾವುಟಗಳನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ' ಎಂದು ದೂರಿದರು.

"ಹಾಗೆಯೇ, ತಮ್ಮ ತಮ್ಮ ಮನೆಗಳ ಗೋಡೆ ಮೇಲೆ ಬರೆದಿರುವಂತಹ 'ಕಮಲ' ದ ಚಿಹ್ನೆ ಹಾಗೂ ಬರಹಗಳನ್ನು ಅಳಿಸುವಂತೆಯೂ ತಾಕೀತು ಮಾಡುತ್ತಿದ್ದಾರೆ. ಇವೆಲ್ಲ ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ.

ಸಚಿವ ಅನಂತ್‌ ಕುಮಾರ್, ಸಂಸದ ಪಿ.ಸಿ. ಮೋಹನ್‌, ಶಾಸಕ ಆರ್.ಆಶೋಕ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT