4

ಎಸ್‌.ಎಂ. ಕೃಷ್ಣ ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಕೆ. ರಹಮಾನ್‌ ಖಾನ್‌

Published:
Updated:
ಎಸ್‌.ಎಂ. ಕೃಷ್ಣ ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಕೆ. ರಹಮಾನ್‌ ಖಾನ್‌

ಬೆಂಗಳೂರು: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಕೇಂದ್ರ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಅವರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದು ಕೇಂದ್ರ ಮಾಜಿ ಸಚಿವ ಕೆ. ರಹಮಾನ್‌ ಖಾನ್‌ ಮಂಗಳವಾರ ಹೇಳಿದ್ದಾರೆ.

ಎಸ್‌.ಎಂ. ಕೃಷ್ಣ ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗುತ್ತಾರೆ ಎಂಬ ಬಗ್ಗೆ ವರದಿಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ರಹಮಾನ್‌ ಖಾನ್‌ ಅವರು, ‘ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಮರಳಿ ಬಂದರೆ ಸ್ವಾಗತ’ ಎಂದು ತಿಳಿಸಿದ್ದಾರೆ.

ಎಸ್‌.ಎಂ. ಕೃಷ್ಣ ಅವರು ಬಿಜೆಪಿಯಿಂದ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ? ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಬಿಜೆಪಿ ಸೇರಿ ವರ್ಷವಾಯ್ತು
ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ 2017ರ ಮಾರ್ಚ್‌ನಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ್ದರು.

ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೃಷ್ಣ ಅವರಿಗೆ ಪಕ್ಷದ ಸದಸ್ಯತ್ವ ನೀಡಿ ಕಮಲದ ಚಿಹ್ನೆ ಇರುವ ಅಂಗವಸ್ತ್ರ ಹೊದಿಸಲಾಗಿತ್ತು.

‘ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿರುವ ನಾನು ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಅನೇಕ ಸ್ಥಾನಮಾನ ಪಡೆದಿದ್ದೇನೆ. ಇದೀಗ ವಿನಮ್ರತೆಯಿಂದ ಬಿಜೆಪಿ ಸೇರ್ಪಡೆ ಆಗುತ್ತಿರುವುದು ಮಹತ್ತರ ಘಟ್ಟವಾಗಿದೆ’ ಎಂದು ಕೃಷ್ಣ ಹೇಳಿದ್ದರು.

ಸಕ್ರಿಯ ರಾಜಕಾರಣದಲ್ಲಿರುವೆ-ಕೃಷ್ಣ: ‘ನಾನು ಯಾವುದೇ ಸ್ಥಾನಮಾನದ ಆಕಾಂಕ್ಷೆಯೊಂದಿಗೆ ಬಿಜೆಪಿ ಸೇರಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ’ ಎಂದು ಎಸ್.ಎಂ. ಕೃಷ್ಣ ಅವರು ಸೇರ್ಪಡೆಯಾದ ದಿನ ಪ್ರಕಟಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry