ಭಾನುವಾರ, ಡಿಸೆಂಬರ್ 8, 2019
25 °C

ಕಾವೇರಿ ನೀರು ಹಂಚಿಕೆ: ತಮಿಳುನಾಡಿನಲ್ಲಿ ಐಪಿಎಲ್‌ ವಿರೋಧಿಸಿ ಪ್ರತಿಭಟನೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕಾವೇರಿ ನೀರು ಹಂಚಿಕೆ: ತಮಿಳುನಾಡಿನಲ್ಲಿ ಐಪಿಎಲ್‌ ವಿರೋಧಿಸಿ ಪ್ರತಿಭಟನೆ

ಚೆನ್ನೈ: ಕಾವೇರಿ ಜಲವಿವಾದ ಕುರಿತು ನೀಡಿರುವ ತೀರ್ಪನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ, ತಮಿಳುನಾಡಿನಲ್ಲಿ ಟಿವಿಕೆ ಸದಸ್ಯರು ಐಪಿಎಲ್‌2018 ವಿರೋಧಿಸಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದಾರೆ.

ಈ ಸಂಬಂಧ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆಗಾಗಿ ಯೋಜನೆ (ಸ್ಕೀಂ) ರೂಪಿಸುವ ನಿಟ್ಟಿನಲ್ಲಿ, ಮೇ 3ರೊಳಗೆ ಕರಡು ಸಿದ್ಧಪಡಿಸಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿದ ಸುಪ್ರೀಂ ಕೋರ್ಟ್‌, ಆ ಕರಡನ್ನು ಪರಿಶೀಲಿಸಿ ಕಣಿವೆ ವ್ಯಾಪ್ತಿಯ ರಾಜ್ಯಗಳಿಗೆ ಯಾವ ರೀತಿ ನೀರು ಒದಗಿಸಬೇಕು ಎಂಬ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದೆ.

‘ಕಾವೇರಿ ಜಲವಿವಾದ ಕುರಿತು ಕಳೆದ ಫೆಬ್ರುವರಿ 6ರ ತೀರ್ಪನ್ನು ಜಾರಿಗೊಳಿಸಲು ನೀಡಲಾದ ಆರು ವಾರಗಳ ಗಡುವು ಮೀರಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿ ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ‘ನಮ್ಮ ತೀರ್ಪಿನ ಜಾರಿ ನಿಮ್ಮ ಕರ್ತವ್ಯ. ನಮ್ಮ ಆದೇಶವನ್ನು ಚಾಚೂತಪ್ಪದೆ ಪಾಲಿಸಬೇಕಷ್ಟೆ’ ಎಂದು ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ.

ಪ್ರತಿಕ್ರಿಯಿಸಿ (+)