ವಾಟ್ಸ್‌ಆ್ಯಪ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪಟ್ಟಿ

ಗುರುವಾರ , ಮಾರ್ಚ್ 21, 2019
27 °C

ವಾಟ್ಸ್‌ಆ್ಯಪ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪಟ್ಟಿ

Published:
Updated:
ವಾಟ್ಸ್‌ಆ್ಯಪ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಮುಖಂಡರು ಅಂತಿಮಗೊಳಿಸುವುದಕ್ಕೂ ಮುನ್ನವೇ ವಾಟ್ಸ್‌ಆ್ಯಪ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ ಹರಿದಾಡಿದೆ.

ಒಟ್ಟು 131 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಮಾಧ್ಯಮ ಪ್ರಕಟಣೆಗಾಗಿ ಎಂದು ಹಣೆ ಪಟ್ಟಿಯನ್ನು ಒಳಗೊಂಡ ಪಿಡಿಎಫ್‌ ಪ್ರತಿ ಮಂಗಳವಾರ ಸಂಜೆಯಿಂದಲೇ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದೆ.

ಈ ಪಟ್ಟಿಯಿಂದ ಕಾಂಗ್ರೆಸ್‌ ವಲಯದಲ್ಲಿ ಕೆಲ ಕಾಲ ಗೊಂದಲ ಸೃಷ್ಟಿಯಾಯಿತು. ಸಿಎಂ ಸಿದ್ದರಾಮಯ್ಯ ಅವರು ಈ ಪಟ್ಟಿ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ‘ಹರಿದಾಡುತ್ತಿರುವ ಅಭ್ಯರ್ಥಿಗಳ ಪಟ್ಟಿ ನಕಲಿ. ಗೊಂದಲ ಸೃಷ್ಟಿಸಲೆಂದೇ ಅದನ್ನು ಸೃಷ್ಟಿಸಲಾಗಿದೆ. ಎಐಸಿಸಿ ಅಭ್ಯರ್ಥಿಗಳ ಪಟ್ಟಿಗೆ ಇನ್ನೂ ಅನುಮೋದನೆ ನೀಡಿಲ್ಲ. ಫೇಕ್‌ ನ್ಯೂಸ್‌ ಫ್ಯಾಕ್ಟರಿಯ ಉತ್ಪನ್ನಗಳನ್ನು ಪ್ರೋತ್ಸಾಹಿಸದಿರಿ’ ಎಂದಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ರಾತ್ರಿ ಕಾಂಗ್ರೆಸ್‌ ಚುನಾವಣಾ ಪರಿಶೀಲನಾ ಸಮಿತಿ ಸಭೆ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಕುರಿತು ಸಿಎಂ ಸಿದ್ದರಾಮಯ್ಯ ಬುಧವಾರ ಪಕ್ಷದ ಕೆಲವು ಮುಖಂಡರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry