26,469 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಭಾನುವಾರ, ಮಾರ್ಚ್ 24, 2019
32 °C
ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ಘಟಿಕೋತ್ಸವ ನಾಳೆ

26,469 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Published:
Updated:
26,469 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಘಟಿಕೋತ್ಸವದಲ್ಲಿ 26,469 ಅಭ್ಯರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ.

ವಿವಿಯ ಹಂಗಾಮಿ ಕುಲಪತಿ ಎಂ.ಕೆ.ರಮೇಶ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಏಪ್ರಿಲ್‌ 12 (ಗುರುವಾರ) ಬೆಳಿಗ್ಗೆ 9.30ಕ್ಕೆ ನಿಮ್ಹಾನ್ಸ್‌ ಸಮಾವೇಶ ಕೇಂದ್ರದಲ್ಲಿ ಘಟಿಕೋತ್ಸವ ನಡೆಯಲಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಜುಭಾಯ್‌ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

‘ದತ್ತಿ ದಾನಿಗಳು ನೀಡಿರುವ ಚಿನ್ನದ ಪದಕಗಳ ಜತೆಗೆ, ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಅತಿಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ಚಿನ್ನದ ಪದಕ ನೀಡಲಾಗುತ್ತಿದೆ. ಒಟ್ಟು 84 ಚಿನ್ನದ ಪದಕ ಹಾಗೂ 7 ನಗದು ಬಹುಮಾನಗಳನ್ನು ಸಾಧನೆಗೈದ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು’ ಎಂದರು.

**

ಚಿನ್ನದ ಹುಡುಗಿಯರು

ಚಿನ್ನದ ಪದಕ ಹಾಗೂ ನಗದು ಬಹುಮಾನಗಳನ್ನು ಸ್ವೀಕರಿಸುವವರಲ್ಲಿ 67 ಜನ ವಿದ್ಯಾರ್ಥಿನಿಯರೇ ಇದ್ದಾರೆ.

64 ಚಿನ್ನದ ಪದಕ, 3 ನಗದು ಬಹುಮಾನ ಹುಡುಗಿಯರ ಪಾಲಾದರೆ. 4 ನಗದು ಬಹುಮಾನ 20 ಚಿನ್ನದ ಪದಕಗಳು ಹುಡುಗರ ಪಾಲಾಗಿವೆ.

ಬೆಂಗಳೂರಿನ ಎಂ.ಎಸ್‌.ರಾಮಯ್ಯ ವೈದ್ಯಕೀಯ ಕಾಲೇಜಿನ ಶ್ವೇತಾ ಶ್ರೀಧರ್‌ ಎಂಬಿಬಿಎಸ್‌ ಕೋರ್ಸ್‌ನಲ್ಲಿ ಅತಿ ಹೆಚ್ಚು ಅಂಕ ಪಡೆದವರಾಗಿದ್ದು ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನವನ್ನು ಪಡೆಯಲಿದ್ದಾರೆ.

ಬಿಡಿಎಸ್‌ ವಿಭಾಗದಲ್ಲಿ ದಾವಣಗೆರೆಯ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ನ ಲಿಮ್‌ ಬೂನ್‌ ಹೂಯಿ ಅತಿಹೆಚ್ಚು ಅಂಕ ಪಡೆದಿದ್ದು, ನಾಲ್ಕು ನಗದು ಬಹುಮಾನ ಹಾಗೂ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry