ಏಡ್ಸ್‌ ನಿಯಂತ್ರಣ ಸೊಸೈಟಿಗೆ ಹೈಕೋರ್ಟ್‌ ನೋಟಿಸ್

7

ಏಡ್ಸ್‌ ನಿಯಂತ್ರಣ ಸೊಸೈಟಿಗೆ ಹೈಕೋರ್ಟ್‌ ನೋಟಿಸ್

Published:
Updated:

‌ಬೆಂಗಳೂರು: ಎಚ್‌ಐವಿ, ಮಲೇರಿಯಾ, ಹೆಪಟೈಟಿಸ್-ಬಿ ಪತ್ತೆಗಾಗಿ ನಡೆಸುವ ‘ಇಂಡ್ಯುವಿಜುವಲ್ ಡೋನರ್-ನ್ಯೂಕ್ಲಿಕ್ ಆ್ಯಸಿಡ್ ಟೆಸ್ಟಿಂಗ್ (ಐ.ಡಿ-ಎನ್‌.ಎ.ಟಿ) ರಕ್ತ ಪರೀಕ್ಷೆಗೆ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಿಂದ ಹಿಂದೆ ಸರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಒಪ್ಪಂದದಿಂದ ಹಿಂದೆ ಸರಿದಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ‘ಬೆಂಗಳೂರು ಮೆಡಿಕಲ್ ಸಿಸ್ಟಮ್ಸ್’ ಮಾಲೀಕ ಎಸ್.ಪಿ. ಪ್ರಕಾಶ್ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.

ನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿನ ಐ.ಡಿ-ಎನ್‌.ಎ.ಟಿ ರಕ್ತ ಪರೀಕ್ಷೆಗಳಿಗೆ ಅಗತ್ಯವಿರುವ ಕಿಟ್‌ಗಳ ಪೂರೈಕೆಗಾಗಿ ಮೂರು ವರ್ಷಗಳ ಅವಧಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry