ಮಂಗಳವಾರ, ಡಿಸೆಂಬರ್ 10, 2019
26 °C

ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣ: ಕಾರ್ತಿ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣ: ಕಾರ್ತಿ ವಿಚಾರಣೆ

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ವಿಚಾರಣೆಗೊಳಪಡಿಸಿದೆ.

ಈ ಪ್ರಕರಣ ಕುರಿತು ಇದೇ ಮೊದಲ ಬಾರಿ ಕಾರ್ತಿ ಅವರನ್ನು ಇ.ಡಿ ವಿಚಾರಣೆಗೊಳಪಡಿಸಿದೆ. 2006ರಲ್ಲಿ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರು ವಿದೇಶಿ ಹೂಡಿಕೆಗೆ ಅನುಮೋದನೆ ನೀಡಿದ್ದರು. ಇದರಲ್ಲಿ ಹಣ ಅಕ್ರಮ ವರ್ಗಾವಣೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)