‘ದೌರ್ಜನ್ಯ ತಡೆಯಲು ವಿಫಲ’

ಬುಧವಾರ, ಮಾರ್ಚ್ 20, 2019
25 °C

‘ದೌರ್ಜನ್ಯ ತಡೆಯಲು ವಿಫಲ’

Published:
Updated:
‘ದೌರ್ಜನ್ಯ ತಡೆಯಲು ವಿಫಲ’

ಬೆಂಗಳೂರು: ದೇಶದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ನಿರಂತವಾಗಿ ನಡೆಯುತ್ತಿದ್ದರೂ, ಇಂತಹ ಕೃತ್ಯಗಳನ್ನು ತಡೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎನ್‌. ಮೂರ್ತಿ ಮಾತನಾಡಿ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಶೇಕಡ 2ರಷ್ಟೂ ಶಿಕ್ಷೆಯಾಗದೆ ಅಪರಾಧಿಗಳು ಬಿಡುಗಡೆಯಾಗುತ್ತಿದ್ದಾರೆ. ಸತ್ಯ ಹೀಗಿರುವಾಗ ನ್ಯಾಯಾಲಯದ ತೀರ್ಪಿನಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಬಡ್ತಿ ಮೀಸಲಾಯಿತಿ ಕಾಯ್ದೆಯನ್ನು ಸರ್ಕಾರ ರದ್ದುಗೊಳಿಸದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಹಿತ ಕಾಯಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ಚಂದ್ರಹಾಸ, ವೆಂಕಟಪ್ಪ, ನಾರಾಯಣ, ಸಂಪತ್‌, ಶಿವಕುಮಾರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry