ನೀತಿ ಸಂಹಿತೆ ಪಾಲಿಸಲು ಕಟ್ಟುನಿಟ್ಟಾಗಿ ಸೂಚನೆ

7

ನೀತಿ ಸಂಹಿತೆ ಪಾಲಿಸಲು ಕಟ್ಟುನಿಟ್ಟಾಗಿ ಸೂಚನೆ

Published:
Updated:

ಚಿಕ್ಕೋಡಿ: ‘ಪ್ರಸಕ್ತ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಚುನಾವಣೆ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು. ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಚಿಕ್ಕೋಡಿ–ಸದಲಗಾ ವಿಧಾನಸಭೆ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಉಪವಿಭಾಗಾಧಿಕಾರಿ ರಾಜು ಮೊಗವೀರ ಹೇಳಿದರು.

ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರಕ್ಕೆ ಸ್ಪರ್ಧೆ ಬಯಸುವವರು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮತ್ತು ನಿಪ್ಪಾಣಿ ವಿಧಾನಸಭೆ ಕ್ಷೇತ್ರಕ್ಕೆ ಸ್ಪರ್ಧಿಸುವವರು ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಇದೇ 17ರಿಂದ 24ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸುವವರ ಸೇರಿ ಐದು ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರವೇಶವಿದೆ' ಎಂದರು.

‘ಅಭ್ಯರ್ಥಿಗಳ ಅನುಸೂಚಿತ ಜಾತಿ, ಅನುಸೂಚಿತ ಪಂಗಡದವರು ಇದ್ದಲ್ಲಿ ತಹಶೀಲ್ದಾರರಿಂದ ಇತ್ತೀಚೆಗೆ ನೀಡಲಾದ ಜಾತಿ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಬೇಕು. ಅಭ್ಯರ್ಥಿಗಳ ಸೂಚಕರು ಆಯಾ ಕ್ಷೇತ್ರ ಮತದಾರರೇ ಆಗಿರಬೇಕು. ನೋಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಫಾರ್ಮ್ ಎ ಮತ್ತು ಫಾರ್ಮ್‌ ಬಿ ಹಾಗೂ ಒಬ್ಬ ಸೂಚಕ ಇರಬೇಕು’ ಎಂದು ತಿಳಿಸಿದರು.

ಉಮೇದುವಾರರ ಮಾಹಿತಿಗಾಗಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 08338–272132 ಅಥವಾ 08338–272299ಗೆ ಕರೆ ಮಾಡಬಹುದಾಗಿದೆ ಎಂದು ಮೊಗವೀರ ಹೇಳಿದರು.

ನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಚುನಾವಣಾಧಿಕಾರಿ ರವಿಕುಮಾರ್, ತಹಶೀಲ್ದಾರ್ ಚಿದಂಬರ ಕುಲಕರ್ಣಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry