ಶನಿವಾರ, ಡಿಸೆಂಬರ್ 14, 2019
20 °C

ಕ್ರಿಕೆಟ್‌ ಬೆಟ್ಟಿಂಗ್‌: ಐವರ ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕ್ರಿಕೆಟ್‌ ಬೆಟ್ಟಿಂಗ್‌: ಐವರ ಬಂಧನ

ರಾಜಸ್ಥಾನ: ಸದ್ಯ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಪಂದ್ಯಾವಳಿ ಸೇರಿದಂತೆ ವಿವಿಧ ಪಂದ್ಯಗಳಿಗೆ ಸಂಬಂಧಿಸಿ ಬೆಟ್ಟಿಂಗ್ ನಡೆಸಿದ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಸಿಕರ್‌ ಪೊಲೀಸರು ಬುಧವಾರ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ನಗದು, 17 ಮೊಬೈಲ್ ಫೋನ್‌, ಲ್ಯಾಪ್‌ಟಾಪ್‌ಗಳು, ಟಿವಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಪ್ರತಿಕ್ರಿಯಿಸಿ (+)