ಶುಕ್ರವಾರ, ಡಿಸೆಂಬರ್ 6, 2019
19 °C

ಧಾರವಾಡ: ಅಮಿತ್ ಶಾ ಪ್ರತಿಭಟನೆಗೆ ಅನುಮತಿ ನೀಡಿದ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಅಮಿತ್ ಶಾ ಪ್ರತಿಭಟನೆಗೆ ಅನುಮತಿ ನೀಡಿದ ಜಿಲ್ಲಾಧಿಕಾರಿ

ಧಾರವಾಡ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏ.12ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ತಿಳಿಸಿದರು.

ಏ. 12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಸುಗಮ ಕಲಾಪ ನಡೆಸಲು ಕಾಂಗ್ರೆಸ್ ಪಕ್ಷದ ನಾಯಕರು ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆಗೆ ಅನುಮತಿ ಕೇಳಿದ್ದರು

ಈ ಸಂಬಂಧ ಹುಬ್ಬಳ್ಳಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರು ಬುಧವಾರ ಬಿಜೆಪಿ ಮುಖಂಡರೊಂದಿಗೆ ಪ್ರತಿಭಟನಾ ಸ್ಥಳ ಪರಿಶೀಲನೆ ನಡೆಸಿದರು. ಆನಂತರ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಳ್ಳಿ ಅವರನ್ನು ಖುದ್ದಾಗಿ ಭೇಟಿಯಾಗಿ ಪ್ರತಿಭಟನೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಇದಕ್ಕೆ ಸಮ್ಮತಿ ಸೂಚಿಸಿದ ಜಿಲ್ಲಾಧಿಕಾರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದರು ಎಂದು ಅರವಿಂದ ಬೆಲ್ಲದ ತಿಳಿಸಿದರು.

ಪ್ರತಿಕ್ರಿಯಿಸಿ (+)