ಬುಧವಾರ, ಡಿಸೆಂಬರ್ 11, 2019
24 °C
ಸ್ವೀಪ್ ಕಾರ್ಯಕ್ರಮದ ಅಂಗವಾಗಿ ನಡೆದ ಜಾಗೃತಿ ಅಭಿಯಾನ

ಮತ ಜಾಗೃತಿಗೆ ಮೋಂಬತ್ತಿ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತ ಜಾಗೃತಿಗೆ ಮೋಂಬತ್ತಿ ಮೆರವಣಿಗೆ

ಚಾಮರಾಜನಗರ: ನಗರದಲ್ಲಿ ಮಂಗಳವಾರ ರಾತ್ರಿ ಮೊಂಬತ್ತಿ ಮೆರವಣಿಗೆ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ನಿಮಿತ್ತ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮೊಂಬತ್ತಿ ಮೆರವಣಿಗೆಗೆ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‌ಕುಮಾರ್‌ ಚಾಲನೆ ನೀಡಿದರು.

ಜಾಥಾವು ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು.

ಜಾಥಾದಲ್ಲಿ ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮೊಂಬತ್ತಿ ಹಿಡಿದು ಜಾಗೃತಿ ಸಂದೇಶವನ್ನು ಸಾರಿದರು.ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯದರ್ಶಿ ಮುನಿರಾಜಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪ್ರತಿಕ್ರಿಯಿಸಿ (+)