ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

7

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

Published:
Updated:
ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಸಿರುಗುಪ್ಪ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಸೋಮವಾರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ತಾಲ್ಲೂಕಿನ ಗಡಿಭಾಗದ ಸೀಮಾಂಧ್ರದ ಮರಳಿ ಗ್ರಾಮದ ನಿವಾಸಿ ಮಾರೆಮ್ಮ ಅವರು ಭಾನುವಾರ ರಾತ್ರಿ ಹೆರಿಗೆಗೆ ಆಸ್ಪತ್ರೆ ದಾಖಲಾಗಿದ್ದರು.

ಮಾರೆಮ್ಮ ಅವರು ವಿವಾಹವಾಗಿ 10 ವರ್ಷವಾದರೂ ಸಂತಾನ ಭಾಗ್ಯವಿರಲಿಲ್ಲ. ಈಗ ಮೊದಲ ಹೆರಿಗೆಯಲ್ಲಿ ಎರಡು ಹೆಣ್ಣು, ಒಂದು ಗಂಡು ಮಗುವಿಗೆ ತಾಯಿಯಾಗಿದ್ದಾರೆ.

‘ತಾಯಿ, ತ್ರಿವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯೆ ಡಾ.ಗಂಗಮ್ಮ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry