ಮಂಗಳವಾರ, ಡಿಸೆಂಬರ್ 10, 2019
25 °C

ಚನ್ನಪಟ್ಟಣದಿಂದ ಚುನಾವಣೆ ಸ್ಪರ್ಧಿಸುವುದಿಲ್ಲ: ಎಚ್.ಎಂ.‌ ರೇವಣ್ಣ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣದಿಂದ ಚುನಾವಣೆ ಸ್ಪರ್ಧಿಸುವುದಿಲ್ಲ: ಎಚ್.ಎಂ.‌ ರೇವಣ್ಣ ಸ್ಪಷ್ಟನೆ

ಮಾಗಡಿ: ಮುಂದಿನ‌ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಾರಿಗೆ ಸಚಿವ ಎಚ್.ಎಂ.‌ ರೇವಣ್ಣ ಸ್ಪಷ್ಟನೆ ನೀಡಿದರು.

ಬುಧವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಡಿಕೆಎಸ್‌ ಸಹೋದರರು ಒತ್ತಾಯ ಮಾಡಿದ್ದಾರೆ. ಆದರೆ ‌ನನಗೆ ಅದರಲ್ಲಿ ಆಸಕ್ತಿ ಇಲ್ಲ. ಮಾಗಡಿಯಲ್ಲಿ‌ ಬಾಲಕೃಷ್ಣ ಪರ ಪ್ರಚಾರ ಮಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸಿದರೆ ಅಲ್ಲಿಗೂ ತೆರಳಿ ಪ್ರಚಾರ ಕೈಗೊಳ್ಳುತ್ತೇನೆ’ ಎಂದರು.

ಜೆಡಿಎಸ್ ಸೇರ್ಪಡೆ

ರಾಮನಗರ: 
ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಗುರುವಾರ ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದೇನೆ ಎಂದು ಕೆಎಂಎಫ್ ಅಧ್ಯಕ್ಷ  ಪಿ‌. ನಾಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರೈತರ ಏಳ್ಗೆಗೆ ಯೋಜನೆಗಳನ್ನು ರೂಪಿಸಬೇಕು ಎನ್ನುವ ಬೇಡಿಕೆಯೊಂದಿಗೆ ಜೆಡಿಎಸ್ ಸೇರುತ್ತಿದ್ದೇನೆ’ ಎಂದು ಹೇಳಿದರು. 

ಪ್ರತಿಕ್ರಿಯಿಸಿ (+)