4

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕೆ ರಜನಿಕಾಂತ್ ಅಸಮಾಧಾನ

Published:
Updated:
ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕೆ ರಜನಿಕಾಂತ್ ಅಸಮಾಧಾನ

ಚೆನ್ನೈ: ಐಪಿಎಲ್ ಕ್ರಿಕೆಟ್ ಪಂದ್ಯ (ಇಂಡಿಯನ್ ಪ್ರೀಮಿಯರ್ ಲೀಗ್) ವಿರೋಧಿಸಿ ಪ್ರತಿಭಟನೆ ನಡೆಸಿದ ಗುಂಪು ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಕ್ಕೆ ನಟ ರಜನಿಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸಮವಸ್ತ್ರ ತೊಟ್ಟು ಕರ್ತವ್ಯದಲ್ಲಿರುವ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಹಿಂಸೆಯ ಪರಾಕಾಷ್ಠೆ’ ಎಂದು ಅವರು ಬುಧವಾರ ಟ್ವೀಟ್ ಮಾಡಿದ್ದಾರೆ. ಹಲ್ಲೆಯ ವಿಡಿಯೊವನ್ನೂ ಅವರು ಹಂಚಿಕೊಂಡಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ (ಸಿಎಂಬಿ) ರಚನೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿರುವ ವೇಳೆ ಐಪಿಎಲ್ ಪಂದ್ಯ ಆಡಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಕಾರರು ಮಂಗಳವಾರ ಬ್ಯಾರಿಕೇಡ್‌ಗಳನ್ನು ದಾಟಿ ಎಂ.ಎ. ಚಿದಂಬರಂ ಕ್ರೀಡಾಂಗಣವನ್ನು ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ತಡೆದಿದ್ದರು. ಆಗ ಪೊಲೀಸರ ಮೇಲೆ ಹಲ್ಲೆ ನಡೆದಿತ್ತು.

‘ದೇಶಕ್ಕೆ ಮಾರಕವಾದ ಇಂಥ ಹಿಂಸೆಯನ್ನು ತಕ್ಷಣಕ್ಕೆ ತಡೆಯಬೇಕು. ಪೊಲೀಸರ ಮೇಲೆ ಹಲ್ಲೆ ನಡೆಸುವವರನ್ನು ಶಿಕ್ಷಿಸಲು ಇನ್ನಷ್ಟು ಕಠಿಣ ಕಾನೂನು ಬೇಕು’ ಎಂದು ರಜನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆದರೆ, ರಜನಿಕಾಂತ್ ಅವರ ನಿಲುವಿಗೆ ಟ್ವಿಟರ್‌ನಲ್ಲಿ ವಿರೋಧ ವ್ಯಕ್ತವಾಗಿದೆ. ರಜನಿಕಾಂತ್ ಅವರು ತಮ್ಮ ಸಿನಿಮಾಗಳಲ್ಲಿ ಪೊಲೀಸರ ವಿರುದ್ಧ ಮಾತನಾಡಿರುವ ವಿಡಿಯೊಗಳನ್ನು ಕೆಲವರು  ಹಂಚಿಕೊಂಡಿದ್ದಾರೆ.

ಇನ್ನಷ್ಟು...

ಕಾವೇರಿ ವಿವಾದ: ಚೆನ್ನೈನಿಂದ ಐಪಿಎಲ್‌ ಪಂದ್ಯಗಳ ಸ್ಥಳಾಂತರ ಸಾಧ್ಯತೆ

* ಚೆನ್ನೈನಲ್ಲಿ 350 ಮಂದಿ ಪೊಲೀಸ್‌ ವಶಕ್ಕೆ: 4 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ಚೆನ್ನೈ ಸೂಪರ್‌ಕಿಂಗ್ಸ್‌ಗೆ ಜಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry