ಶುಕ್ರವಾರ, ಡಿಸೆಂಬರ್ 6, 2019
25 °C

ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಳ: ಮನಮೋಹನ್‌ ಸಿಂಗ್ ಆತಂಕ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಳ: ಮನಮೋಹನ್‌ ಸಿಂಗ್ ಆತಂಕ

ಚಂಡೀಗಡ: ದೇಶದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸದಿದ್ದರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಆತಂಕ ವ್ಯಕ್ತಪಡಿಸಿದರು.

ಪಂಜಾಬ್‌ ವಿಶ್ವವಿದ್ಯಾಲಯದಲ್ಲಿ ಎಸ್.ಬಿ. ರಂಗನೇಕರ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೌರ್ಜನ್ಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಿದರೆ ದ್ವೇಷದ ರಾಜಕೀಯಕ್ಕೆ ಆಹ್ವಾನ ನೀಡಿದಂತೆ’ ಎಂದರು.

‘ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿಯ ರಾಜಕೀಯವನ್ನು ನಾವು ಬಲವಾಗಿ ತಿರಸ್ಕರಿಸಬೇಕು’ ಎಂದು ಅವರು ಕರೆ ನೀಡಿದರು.

ಪ್ರತಿಕ್ರಿಯಿಸಿ (+)