ಭಾನುವಾರ, ಡಿಸೆಂಬರ್ 15, 2019
25 °C

ಎಲ್ಲ ರೈತರ ಸಾಲ ಮನ್ನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಲ್ಲ ರೈತರ ಸಾಲ ಮನ್ನಾ

ಬೆಂಗಳೂರು: ರಾಜ್ಯದ ಎಲ್ಲ ರೈತರ ಸಾಲ ಮನ್ನಾ, ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ, ಪ್ರತಿವರ್ಷ 10 ಲಕ್ಷ ಉದ್ಯೋಗ ಸೃಷ್ಟಿ...

ಅಖಿಲ ಭಾರತ ಮಹಿಳಾ ಸಬಲೀಕರಣ ಪಕ್ಷದ (ಆಲ್‌ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಾರ್ಟಿ– ಎಂಇಪಿ) ‍ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳಿವು. ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಖ್ ಬುಧವಾರ ಬಿಡುಗಡೆ ಮಾಡಿದರು.

‘ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಶೇ 35ರಷ್ಟು ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗುವುದು. ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದೂ ಹೇಳಿದರು.

ಪ್ರಣಾಳಿಕೆಯಲ್ಲಿನ ಇತರ ಅಂಶಗಳು

*  ಸರ್ಕಾರಿ ಶಾಲೆಗಳಿಗೆ ವಿಶ್ವದರ್ಜೆಯ ಸೌಲಭ್ಯ

* ಎಲ್ಲ ಜಿಲ್ಲೆಗಳಲ್ಲಿ ಮಣ್ಣು ಪರೀಕ್ಷೆ ಕೇಂದ್ರಗಳನ್ನು ಸ್ಥಾಪನೆ

* ಎಲ್ಲರಿಗೂ ಏಕರೂ‍ಪದ ವಿದ್ಯುತ್ ಪೂರೈಕೆ

* ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ

* ಪಾನನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಜಾರಿ

* ಕಾವೇರಿ, ಮಹದಾಯಿ, ಕೃಷ್ಣಾ ನೀರಿನ ಹಕ್ಕು ರಕ್ಷಣೆಗೆ ದಿಟ್ಟ ಕ್ರಮ

* ಅಪರಾಧಿಗಳ ಪತ್ತೆಗೆ ಇ-ಟೆಕ್ನಾಲಜಿ ಬಳಕೆ

* ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಅತೀ ಹೆಚ್ಚು ಒಣಭೂಮಿ ರಾಜ್ಯದಲ್ಲಿ‌ ಇರುವುದರಿಂದ, ಬರಡು ನೆಲಕ್ಕೆ ನೀರು ಹರಿಸಿ ಕೃಷಿ ಮೂಲಕವೇ ಸಮೃದ್ಧ ರಾಜ್ಯವನ್ನಾಗಿ ಮಾಡಲು ಪಣ.

ಪ್ರತಿಕ್ರಿಯಿಸಿ (+)