ಶನಿವಾರ, ಡಿಸೆಂಬರ್ 14, 2019
20 °C

ಸುತ್ತೂರು ಸ್ವಾಮೀಜಿ– ಶ್ರೀನಿವಾಸ ಪ್ರಸಾದ್‌ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುತ್ತೂರು ಸ್ವಾಮೀಜಿ– ಶ್ರೀನಿವಾಸ ಪ್ರಸಾದ್‌ ಸಭೆ

ಮೈಸೂರು: ಬಿಜೆಪಿ ಮುಖಂಡ ವಿ.ಶ್ರೀನಿವಾಸ ಪ್ರಸಾದ್‌ ಮಂಗಳವಾರ ರಾತ್ರಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾದರು. ಇಬ್ಬರೂ ಸುಮಾರು 45 ನಿಮಿಷ ಗೋಪ್ಯ ಮಾತುಕತೆ ನಡೆಸಿದರು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಚಾಮುಂಡೇಶ್ವರಿ, ವರುಣಾ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಲು ತಂತ್ರಗಳನ್ನು ರೂಪಿಸುತ್ತಿರುವ ಶ್ರೀನಿವಾಸ ಪ್ರಸಾದ್‌ ಅವರು ಸ್ವಾಮೀಜಿ ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶುಕ್ರವಾರ ಸುತ್ತೂರು ಸ್ವಾಮೀಜಿಯನ್ನು ಭೇಟಿಯಾಗಿ ಗೋಪ್ಯ ಮಾತುಕತೆ ನಡೆಸಿದ್ದನ್ನು ಸ್ಮರಿಸಬಹುದು.

ಪ್ರತಿಕ್ರಿಯಿಸಿ (+)