ಭಾನುವಾರ, ಡಿಸೆಂಬರ್ 15, 2019
23 °C

ಗುಂಡಿನ ಚಕಮಕಿ: ಯೋಧ, ನಾಗರಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಗುಂಡಿನ ಚಕಮಕಿ: ಯೋಧ, ನಾಗರಿಕರ ಸಾವು

ಶ್ರೀನಗರ: ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಭದ್ರತಾ ಪಡೆಗಳು ಹಾಗೂ ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ.

‘ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿದಾಗ ನಸುಕಿನ ಜಾವ ಗುಂಡಿನ ಚಕಮಕಿ ನಡೆದಿದೆ. ಆಗ ತೀವ್ರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳ ವಿರುದ್ಧ ಘರ್ಷಣೆಗೆ ಇಳಿದ ಸ್ಥಳೀಯರು ಕಲ್ಲು ತೂರಾಟ ನಡೆಸಿದಾಗ ತೀವ್ರ ಗಾಯಗೊಂಡಿದ್ದ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟರು.

ಪ್ರತಿಕ್ರಿಯಿಸಿ (+)