ಮೀಸಲಾತಿ ರದ್ದುಪಡಿಸಿದ ಬಾಂಗ್ಲಾದೇಶ

ಬುಧವಾರ, ಮಾರ್ಚ್ 27, 2019
22 °C

ಮೀಸಲಾತಿ ರದ್ದುಪಡಿಸಿದ ಬಾಂಗ್ಲಾದೇಶ

Published:
Updated:
ಮೀಸಲಾತಿ ರದ್ದುಪಡಿಸಿದ ಬಾಂಗ್ಲಾದೇಶ

ಢಾಕಾ: ‘ಸರ್ಕಾರಿ ಸೇವೆಗಳಲ್ಲಿ ಮೀಸಲಾತಿ ವ್ಯವಸ್ಥೆಯನ್ನು ರದ್ದುಪಡಿಲು ನಿರ್ಧರಿಸಲಾಗಿದೆ’ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸಿನಾ ತಿಳಿಸಿದ್ದಾರೆ.

‘ಇದುವರೆಗೆ ವಿಶೇಷ ವರ್ಗಕ್ಕೆ ಮೀಸಲಾತಿ ಕಲ್ಪಿಸಲಾಗಿತ್ತು. ಇನ್ನು ಮುಂದೆ ಅಂಗವಿಕಲರು ಮತ್ತು ಹಿಂದುಳಿದ ವರ್ಗದ ಅಲ್ಪಸಂಖ್ಯಾತರಿಗೆ ಮಾತ್ರ ವಿಶೇಷ ವ್ಯವಸ್ಥೆ ಕಲ್ಪಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ’ ಎಂದು ಅವರು ಸಂಸತ್‌ನಲ್ಲಿ ತಿಳಿಸಿದ್ದಾರೆ.

ಸರ್ಕಾರದ ಈ ನೀತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ವಿಶ್ವವಿದ್ಯಾಲಯಗಳಲ್ಲಿ ತರಗತಿ ಮತ್ತು ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಜನಸಾಮಾನ್ಯರು ತೊಂದರೆಗೆ ಸಿಲುಕಿದ್ದಾರೆ. ಈಗಲಾದರೂ ಅವರು ಮನೆಗೆ ತೆರಳಲಿ’ ಎಂದು ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ದೇಶದ ವಿವಿಧೆಡೆ ಸಾವಿರಾರು ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry