ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಸಿದ್ಧತೆ

7
ಮದ್ದೂರಮ್ಮ ದನಗಳ ಜಾತ್ರೆಗಿಲ್ಲ ನೀತಿ ಸಂಹಿತೆ; ಚುನಾವಣಾಧಿಕಾರಿ ಕೃಷ್ಣಪ್ಪ

ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಸಿದ್ಧತೆ

Published:
Updated:

ಮದ್ದೂರು: ಶಾಂತಿಯುತ, ನಿಷ್ಪಕ್ಷಪಾತ, ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಚುನಾವಣಾಧಿಕಾರಿ ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ. ಸಾರ್ವಜನಿಕರು ಯಾವುದೇ ಭೀತಿ ಇಲ್ಲದೇ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ರಾಜಕೀಯ ಪಕ್ಷಗಳು ಚುನಾವಣೆ ನೀತಿ ಸಂಹಿತೆಯನ್ನು ಮೀರುವಂತಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಫೆ. 28ರ ಅನ್ವಯ ಒಟ್ಟು 2,02,325 ಮತದಾರರಿದ್ದಾರೆ. ಇವರಲ್ಲಿ ಪುರುಷರು 1,00,105, ಮಹಿಳೆಯರು 1,02,217, ಹಾಗೂ 3 ಮಂದಿ ಇತರರು ಇದ್ದಾರೆ. ಚುನಾವಣಾ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಏ.14 ರಂದು ಕಡೆಯ ದಿನ. ಅಲ್ಲಿಯವರೆಗೆ ಮತದಾರರ ಪಟ್ಟಿಗೆ ಹೆಸರು ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.

ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿವೆ. ಇವುಗಳಲ್ಲಿ 74 ಸೂಕ್ಷ್ಮ , 23 ಅತೀ ಸೂಕ್ಷ್ಮ 4 ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದ, ಎಲ್ಲಾ ಮತಗಟ್ಟೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ’ ಎಂದರು.

‘ಚುನಾವಣಾ ಅಕ್ರಮ ತಡೆಗಾಗಿ 18 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಚುನಾವಣಾ ವೆಚ್ಚದ ನಿಗಾ ಇಡಲಾಗಿದೆ. ತಾಲ್ಲೂಕಿನ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅಕ್ರಮ ಹಣ, ಮದ್ಯ ಇನ್ನಿತರ ವಸ್ತುಗಳ ಸಾಗಣೆ ಮೇಲೆ ನಿಗಾ ಇಡಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ’ ಎಂದು ತಿಳಿಸಿದರು.

ಜಾತ್ರೆಗೆ ಅವಕಾಶ: ‘ಚುನಾವಣೆ ನೀತಿ ಸಂಹಿತೆ ನಡುವೆಯೂ ಪಟ್ಟಣದ ಮದ್ದೂರಮ್ಮ ದನಗಳ ಜಾತ್ರೆಗೆ ಏ. 20ರಿಂದ 25ರವರೆಗೆ  5 ದಿನಗಳ ಅವಕಾಶ ಕಲ್ಪಿಸಲಾಗಿದೆ’ ಅಲ್ಲದೇ ಜಾತ್ರೆ ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ’ ಎಂದರು.

ಚುನಾವಣಾ ಸಹಾಯಕ ಅಧಿಕಾರಿ ತಹಶೀಲ್ದಾರ್ ಜಿ.ಎಚ್. ನಾಗರಾಜು, ನೋಡಲ್ ಅಧಿಕಾರಿ ಮಹದೇವಗೌಡ, ಪುರಸಭಾ ಮುಖ್ಯಾಧಿಕಾರಿ ಕುಮಾರ್, ಎಂಜಿನಿಯರ್ ಮರಿಗೌಡ ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry