ಬುಧವಾರ, ಜುಲೈ 15, 2020
22 °C

ಆರ್‌ಐ ಬಳಿ 2 ವಸತಿ ಸಂಕೀರ್ಣ, 4 ನಿವೇಶನ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಐ ಬಳಿ 2 ವಸತಿ ಸಂಕೀರ್ಣ, 4 ನಿವೇಶನ!

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ‍‍ಪೊಲೀಸರಿಂದ ದಾಳಿಗೆ ಒಳಗಾಗಿರುವ ಬಿಬಿಎಂಪಿ ಕಂದಾಯ ನಿರೀಕ್ಷಕ ಜಿ.ಎಂ.ಶಿವಕುಮಾರ್‌ ಬೆಂಗಳೂರಿನ ವಾಜರಹಳ್ಳಿಯಲ್ಲಿ ಎರಡು ವಸತಿ ಸಂಕೀರ್ಣ ಹಾಗೂ ನಾಲ್ಕು ನಿವೇಶನಗಳನ್ನು ಹೊಂದಿದ್ದಾರೆ.

ಎಸಿಬಿ ಅಧಿಕಾರಿಗಳು ಮಂಗಳವಾರ ಶಿವಕುಮಾರ್‌ ಹಾಗೂ ಕೆಪಿಟಿಸಿಎಲ್‌ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಲ್ಲಿಕಾರ್ಜುನ ಎನ್. ಸವಣೂರ (ಹುಬ್ಬಳ್ಳಿ) ಒಳಗೊಂಡಂತೆ ಆರು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು.

ಶಿವಕುಮಾರ್‌ ವಾರ್ಡ್‌ ನಂಬರ್‌ 198ರ ಕಂದಾಯ ನಿರೀಕ್ಷಕರಾಗಿದ್ದಾರೆ. ಮೂರು ದಿನಗಳಿಂದಲೂ ಆರು ಅಧಿಕಾರಿಗಳಿಗೆ ಸಂಬಂಧಿಸಿದ 22 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಆದಾಯ ಮೀರಿದ ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಪತ್ತೆ ಮಾಡಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.