‘ನೇಕಾರರಿಗೆ ಟಿಕೆಟ್ ನೀಡಿ‘

7

‘ನೇಕಾರರಿಗೆ ಟಿಕೆಟ್ ನೀಡಿ‘

Published:
Updated:

ಬೆಂಗಳೂರು: ‘ಬಿಜೆಪಿಯ ಮೊದಲ ಪಟ್ಟಿಯಲ್ಲಿ ನೇಕಾರ ಸಮುದಾಯದ ಮುಖಂಡರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ನಮ್ಮನ್ನು ಕಡೆಗಣಿಸಿ ಬಲಾಢ್ಯರಿಗೆ ಮಣೆ ಹಾಕಿದರೆ ಹೋರಾಟ ನಡೆಸುತ್ತೇವೆ’ ಎಂದು ನೇಕಾರರ ಜಾಗೃತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜು ನೊಣವಿನಕೆರೆ ಹೇಳಿದರು.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್‌ ನೀಡುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದೆವು. ಅದಕ್ಕೆ ಅವರು ‌ಒಪ್ಪಿದ್ದರು. ಆದರೆ, ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್‌ ಸಿಗುವುದು ಅನುಮಾನ. ಹೀಗಾದರೆ ಬಿಜೆಪಿಗೆ ಮತ ಹಾಕುವುದಿಲ್ಲ’ ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry