ಸೋಮವಾರ, ಜುಲೈ 13, 2020
25 °C

‘ನನ್ನ ಮಾಹಿತಿಯನ್ನೂ ಕದಿಯಲಾಗಿತ್ತು’

ಪಿಟಿಐ Updated:

ಅಕ್ಷರ ಗಾತ್ರ : | |

‘ನನ್ನ ಮಾಹಿತಿಯನ್ನೂ ಕದಿಯಲಾಗಿತ್ತು’

ವಾಷಿಂಗ್ಟನ್‌: ‘ಇಂಗ್ಲೆಂಡ್‌ನ ರಾಜಕೀಯ ಸಲಹಾ ಸಂಸ್ಥೆ ಕೇಂಬ್ರಿಜ್ ಅನಲಿಟಿಕಾ, ನನ್ನ ವೈಯಕ್ತಿಕ ಮಾಹಿತಿಯನ್ನೂ ಅಕ್ರಮವಾಗಿ ಸಂಗ್ರಹಿಸಿತ್ತು’ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಸಿಇಒ ಮಾರ್ಕ್‌ ಝುಕರ್‌ಬರ್ಗ್‌ ತಿಳಿಸಿದ್ದಾರೆ.

ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿ ಅಮೆರಿಕ ಸಂಸದರ ಮುಂದೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಅವರು, ನಿಮ್ಮ ಮಾಹಿತಿಯನ್ನೂ ಕದಿಯಲಾಗಿತ್ತೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ಆ ಸಂಸ್ಥೆ ಈ ಕೆಲಸ ಮಾಡಿದ್ದು, ಅದರ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಸಂಸದರ ಸರಣಿ ಪ್ರಶ್ನೆಗಳಿಗೆ ಉತ್ತರಿಸಿರುವ ಝುಕರ್‌ಬರ್ಗ್‌, ಬಳಕೆದಾರರ ಮಾಹಿತಿ ರಕ್ಷಣೆಗೆ ಹಲವು ಸುಧಾರಣಾ ಕ್ರಮ ಕೈಗೊಳ್ಳಲಾಗುವುದು. ಆದರೆ ಇದಕ್ಕೆ ಸಮಯ ಹಿಡಿಯುತ್ತದೆ ಎಂದಿದ್ದಾರೆ.

‘ಆ ಸಂಸ್ಥೆ ಹೇಗೆ ಮಾಹಿತಿ ಸಂಗ್ರಹಿಸಿತು, ಯಾವ ಉದ್ದೇಶ ಹೊಂದಿತ್ತು ಎಂಬುದನ್ನು ಸಮಗ್ರವಾಗಿ ತಿಳಿದುಕೊಂಡು ಬಳಕೆದಾರರಿಗೆ ತಿಳಿಸಲಾಗುವುದು. ಅಮೆರಿಕ, ಇಂಗ್ಲೆಂಡ್‌ ಸೇರಿದಂತೆ ಹಲವು ರಾಷ್ಟ್ರಗಳ ಸರ್ಕಾರಗಳ ಜತೆ ವೈಯಕ್ತಿಕ ಮಾಹಿತಿ ರಕ್ಷಣೆಗೆ ಏನೇನು ಕ್ರಮ ಕೈಗೊಂಡಿವೆ ಎಂಬುದರ ಕುರಿತು ಮಾತನಾಡುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.