ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರದ ಆರೋಪಿ ಬಿಜೆಪಿ ಶಾಸಕ ಕುಲದೀಪ್‌ ವಿಚಾರಣೆ ಆರಂಭಿಸಿದ ಸಿಬಿಐ

Last Updated 13 ಏಪ್ರಿಲ್ 2018, 2:51 IST
ಅಕ್ಷರ ಗಾತ್ರ

ಲಖನೌ(ಉತ್ತರ ಪ್ರದೇಶ): 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದೆ.

ಲಖನೌದಲ್ಲಿನ ಶಾಸಕರ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ 4 ಗಂಟೆಗೆ ತೆರಳಿದ ಸಿಬಿಐ ತಂಡ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುತ್ತಿದೆ. ಈ ಪ್ರಕರಣದ ಕುರಿತ ಎಲ್ಲ ದಾಖಲೆಗಳನ್ನು ಹಸ್ತಾಂತರಿಸುವಂತೆ ಸಿಬಿಐ ಉತ್ತರ ಪ್ರದೇಶದ ಪೊಲೀಸರಿಗೆ ಸೂಚಿಸಿದೆ.

ಸಂತ್ರಸ್ಥೆಯು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ನಿವಾಸದ ಮುಂದೆ ಕಳೆದ ಭಾನುವಾರ ಆತ್ಯಹತ್ಯೆಗೆ ಯತ್ನಿಸಿದ್ದಳು. ಆಕೆಯ ತಂದೆ ಪೊಲೀಸ್‌ ಕಸ್ಟಡಿಯಲ್ಲಿ ಇರುವಾಗಲೇ ಸೋಮವಾರ ಮೃತಪಟ್ಟಿದ್ದರು. ಹಾಗಾಗಿ ಈ ಉನ್ನಾವ್ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.
ಇದನ್ನೂ ಓದಿರಿ...
ಉನ್ನಾವ್: ಬೆಳಿಗ್ಗೆ ಎಫ್‌ಐಆರ್, ಸಂಜೆ ನಿರ್ದೋಷಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT