ಭಾನುವಾರ, ಡಿಸೆಂಬರ್ 15, 2019
25 °C

ಶಾಸಕ ತಿಪ್ಪೇಸ್ವಾಮಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರಿಂದ ಪೊರಕೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ತಿಪ್ಪೇಸ್ವಾಮಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರಿಂದ ಪೊರಕೆ ಪ್ರತಿಭಟನೆ

ಚಿತ್ರದುರ್ಗ: ಮೊಳಕಾಲ್ಮುರಿನ ಬಿಜೆಪಿ ಶಾಸಕ ಎಸ್ ತಿಪ್ಪೇಸ್ವಾಮಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ‌ ಎಂದು ಆರೋಪಿಸಿ  ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಾಲಯದ ಬಳಿ ಪೊರಕೆ ಹಿಡಿದು ಮಹಿಳೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮೊಳಕಾಲ್ಮುರು ಕ್ಷೇತ್ರದಿಂದ ಟಿಕೆಟ್ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸಂಸದ ಶ್ರೀರಾಮುಲು ತಿಪ್ಲೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ತಿಪ್ಪೇಸ್ವಾಮಿ ಬೆಂಬಲಿಸುವ ಮಹಿಳೆಯರು ಈ ರೀತಿ ಪೊರಕೆ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಶ್ರೀರಾಮುಲು ಅವರನ್ನು ಕಣಕ್ಕಿಳಿಸಬಾರದು. ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿದೆ.

ಟಿಕೆಟ್ ಘೋಷಣೆಯಾದ‌ ನಂತರ ಚುನಾವಣಾ‌ ಪ್ರಚಾರ ಆರಂಭಿಸಲು  ರಾಮುಲು ಇಂದು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ‌.

ಪ್ರತಿಕ್ರಿಯಿಸಿ (+)