ಗುರುವಾರ , ಫೆಬ್ರವರಿ 20, 2020
19 °C

ಪ್ರಕಾಶ್ ರೈ ಹೆಲಿಕಾಪ್ಟರ್‌ನಲ್ಲಿ ಬರಲು ಅನುಮತಿ ನೀಡಿ: ದಲಿತ ಸಂಘಟನೆಗಳ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಕಾಶ್ ರೈ ಹೆಲಿಕಾಪ್ಟರ್‌ನಲ್ಲಿ ಬರಲು ಅನುಮತಿ ನೀಡಿ: ದಲಿತ ಸಂಘಟನೆಗಳ ಮನವಿ

ಕಲಬುರ್ಗಿ: ‘ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಗುರುವಾರ ರಾತ್ರಿ ನಗರಕ್ಕೆ ಬಂದಿದ್ದ ಪ್ರಕಾಶ್ ರೈ ಅವರು ತಡರಾತ್ರಿ ಹೈದರಾಬಾದ್‌ಗೆ ತೆರಳಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಬರಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಜಯಂತ್ಯುತ್ಸವ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

‘ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ರೈ ಕಾರಿಗೆ ಮುತ್ತಿಗೆ ಹಾಕಿದರು. ಇದರಿಂದ ವಿಚಲಿತರಾದ ಅವರು ಅಲ್ಲಿಂದ ಹೊರಬಂದರು. ಅನಾಹುತಕ್ಕೆ ಎಡೆಮಾಡಿ ಕೊಡಬಾರದು ಎಂಬ ಉದ್ದೇಶದಿಂದ ಅವರನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ’ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜು ಕಪನೂರ ಪ್ರಜಾವಾಣಿಗೆ ತಿಳಿಸಿದರು.

ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಖಂಡಿಸಿ ಪ್ರತಿಭಟನೆ
ಕಲಬುರ್ಗಿ:
ಇಲ್ಲಿನ ಆಫೀಸರ್ಸ್ ಕ್ಲಬ್ ಬಳಿ ಚಿತ್ರ ನಟ ಪ್ರಕಾಶ್ ರೈ ಕಾರಿಗೆ ಮುತ್ತಿಗೆ ಹಾಕಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳ ಮುಖಂಡರು ನಗರದ ಜಗತ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)