ಮಂಗಳವಾರ, ಜೂಲೈ 7, 2020
27 °C

ಇತರೆ ಅತ್ಯಾಚಾರ ಪ್ರಕರಣಗಳಲ್ಲಿ ರಾಹುಲ್‌ ಯಾಕೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ಮಾಡಲಿಲ್ಲ ? ಮೀನಾಕ್ಷಿ ಲೇಖಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇತರೆ ಅತ್ಯಾಚಾರ ಪ್ರಕರಣಗಳಲ್ಲಿ ರಾಹುಲ್‌ ಯಾಕೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ಮಾಡಲಿಲ್ಲ ? ಮೀನಾಕ್ಷಿ ಲೇಖಿ

ನವದೆಹಲಿ: ಇತರೆ ಅತ್ಯಾಚಾರ ಪ್ರಕರಣಗಳಲ್ಲಿ ರಾಹುಲ್‌ ಗಾಂಧಿ ಯಾಕೆ ತಡ ರಾತ್ರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ಮಾಡಲಿಲ್ಲ ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಪ್ರಶ್ನಿಸಿದ್ದಾರೆ.

ಕಠುವಾ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹಾಗೂ ಮಹಿಳೆಯರ ರಕ್ಷಣೆ ಕುರಿತು ಗುರುವಾರ ತಡ ರಾತ್ರಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದ್ದರು.

ಕಾಂಗ್ರೆಸ್‌ ಪ್ರತಿಭಟನೆ ಬಳಿಕ ಬಿಜೆಪಿ ಕಠುವಾ ಘಟನೆ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಕಾಂಗ್ರೆಸ್ ನಡೆಯನ್ನು ಟೀಕಿಸಿದ್ದಾರೆ. 

ಇದು ಕಾಂಗ್ರೆಸ್ ಪಕ್ಷದ ಪೂರ್ವಯೋಜಿತ ಪ್ರತಿಭಟನೆ, ಮೊದಲು ಅಲ್ಪಸಂಖ್ಯಾತರು, ಅಲ್ಪಸಂಖ್ಯಾತರು, ನಂತರ ದಲಿತರು ದಲಿತರು,  ಇದೀಗ ಮಹಿಳೆಯರು, ಮಹಿಳೆಯರು ಎಂದು ಬೊಬ್ಬೆ ಹಾಕುತ್ತಿದ್ದೀರಿ, ರಾಜ್ಯದ ಸಮಸ್ಯೆಗಳನ್ನು ಕೇಂದ್ರದ ಮೇಲೆ ಹಾಕುವುದು ಯಾಕೆ? ಎಂದು ಮೀನಾಕ್ಷಿ ಲೇಖಿ ಪ್ರಶ್ನಿಸಿದ್ದಾರೆ. ಇದನೆಲ್ಲ ನೋಡಿದರೆ ರಾಜ್ಯ ಸರ್ಕಾರಗಳು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂಬುದು ಗೊತ್ತಾಗುತ್ತದೆ ಎಂದು ಮೀನಾಕ್ಷಿ ಲೇಖಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಕಠುವಾ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಅವರು ಆರೋಪಿಸಿದರು. ಬಿಜೆಪಿಯ ಇಬ್ಬರು ಸಚಿವರು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ಇವು ಜನರನ್ನು ದಾರಿತಪ್ಪಿಸುವ ವದಂತಿಗಳು ಎಂದು ತಳ್ಳಿ ಹಾಕಿದರು. ಬಿಜೆಪಿ ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.