ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಚೆಕ್‌ಪೋಸ್ಟ್‌ಗೆ ಡಿಜಿಪಿ ಭೇಟಿ

Last Updated 13 ಏಪ್ರಿಲ್ 2018, 14:47 IST
ಅಕ್ಷರ ಗಾತ್ರ

ತುಮಕೂರು: ವಿಧಾನಸಭಾ ಚುನಾವಣಾ ಪ್ರಯುಕ್ತ ಜಿಲ್ಲೆಯಲ್ಲಿ ಕೈಗೊಂಡ ಭದ್ರತೆ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ಹಾಗೂ ಪೊಲೀಸ್ ಮಹಾ ನಿರೀಕ್ಷಕಿ ನೀಲಮಣಿ ಎನ್.ರಾಜು ಹಾಗೂ ಕೇಂದ್ರ ವಲಯ ಪೊಲೀಸ್ ಮಹಾನಿರೀಕ್ಷಕರಾದ ದಯಾನಂದ್ ಅವರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಚುನಾವಣೆ ಸಂದರ್ಭದಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು, ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಭದ್ರತೆ, ಸೂಕ್ಷ್ಮ ಮತಗಟ್ಟೆ ಮತ್ತು ಪ್ರದೇಶಗಳಲ್ಲಿ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹೆಚ್ಚಿನ ಸಿಬ್ಬಂದಿ ನಿಯೋಜನೆ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಕಚೇರಿಯ ಆಡಳಿತ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತುಮಕೂರು ನಗರದ ಹೊರವಲಯದ ಊರ್ಡಿಗೆರೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ತುಮಕೂರು ನಗರ ಡಿವೈಎಸ್ಪಿ ಕೆ.ಎಸ್.ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT