ಭಾನುವಾರ, ಡಿಸೆಂಬರ್ 15, 2019
25 °C
ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬಿಜೆಪಿ ಪಟ್ಟಿ: 15ಕ್ಕೆ ಅಂತಿಮ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ಪಟ್ಟಿ: 15ಕ್ಕೆ ಅಂತಿಮ ತೀರ್ಮಾನ

ಹುಬ್ಬಳ್ಳಿ: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೇ 15ರಂದು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡನೇ ಪಟ್ಟಿ ಬಿಡುಗಡೆ ಕುರಿತು ಈಗಾಗಲೇ ಹಲವು ಬಾರಿ ಚರ್ಚಿಸಲಾಗಿದೆ. ಬುಧವಾರ ರಾತ್ರಿ ಎರಡು ಗಂಟೆಯವರೆಗೆ ಪಕ್ಷದ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದ್ದು, ದೆಹಲಿಯಲ್ಲಿ ಹೈಕಮಾಂಡ್‌ ಹಾಗೂ ಚುನಾವಣಾ ಸಮಿತಿಯ ಜೊತೆಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಶ್ರೀರಾಮುಲು ಅವರಿಗೆ ಟಿಕೆಟ್‌ ನೀಡಿದ್ದಕ್ಕಾಗಿ ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮೊಳಕಾಲ್ಮುರು ಶಾಸಕ ಎಸ್. ತಿಪ್ಪೇಸ್ವಾಮಿ ಅವರ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ, ‘ಶ್ರೀರಾಮುಲು ಅವರಿಗೆ ಗಲಾಟೆ ತಡೆಯುವ ಶಕ್ತಿ ಇದೆ. ಅವರೇ ಎಲ್ಲ ನೋಡಿಕೊಳ್ಳುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)