ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಗೈರಾದರೆ ಕಠಿಣ ಕ್ರಮ

7

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಗೈರಾದರೆ ಕಠಿಣ ಕ್ರಮ

Published:
Updated:

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ನಿಯೋಜಿತರಾಗಿರುವ ಶಿಕ್ಷಕರು ಕರ್ತವ್ಯಕ್ಕೆ ಗೈರಾದರೆ ಅವರು ಸೇವೆ ಸಲ್ಲಿಸುತ್ತಿರುವ ಶಾಲೆಯ ಫಲಿತಾಂಶವನ್ನು ತಡೆಹಿಡಿಯಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರು ಎಚ್ಚರಿಸಿದ್ದಾರೆ.

ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು ಗೈರಾದರೆ ಆ ಶಾಲೆಯ ಮಾನ್ಯತೆ ರದ್ದುಗೊಳಿಸಲೂ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನಿರ್ದೇಶಕರು ನೀಡಿದ್ದಾರೆ.

ಪರೀಕ್ಷಾ ಮೌಲ್ಯಮಾಪನ ಏಪ್ರಿಲ್‌ 16ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ.

‘ಮೌಲ್ಯಮಾಪನ ಮಾಡುವುದು ಶಿಕ್ಷಕರ ಜವಾಬ್ದಾರಿ ಆಗಿದ್ದರೂ ಅವರಿಗೂ ಖಾಸಗಿ ಬದುಕಿದೆ. ಆರೋಗ್ಯ, ಪೂರ್ವನಿಯೋಜಿತ ಸಮಾರಂಭಗಳಂಥ ಅನಿವಾರ್ಯ ಕಾರಣಗಳಿಂದ ಗೈರಾದವರು ನಿಖರ ದಾಖಲೆ ನೀಡಿದರೆ ವಿನಾಯಿತಿ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಕೆ. ಮಂಜುನಾಥ್‌ ಅವರು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry