ಮಂಗಳವಾರ, ಆಗಸ್ಟ್ 11, 2020
21 °C

ವೈದ್ಯ ದಂಪತಿ ಸೇರಿ ಒಂದೇ ಕುಟುಂಬದ ಐವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈದ್ಯ ದಂಪತಿ ಸೇರಿ ಒಂದೇ ಕುಟುಂಬದ ಐವರ ಸಾವು

ಕುರುಗೋಡು (ಬಳ್ಳಾರಿ ಜಿಲ್ಲೆ): ಇಲ್ಲಿಯ ಭಾಗ್ಯನಗರ ಕ್ಯಾಂಪ್‌ ಬಳಿ, ಚಾಲಕನ ನಿಯಂತ್ರಣ ತ‍ಪ್ಪಿದ ಕಾರೊಂದು ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿಯಾಗಿದ್ದರಿಂದ ವೈದ್ಯ ದಂಪತಿ ಸೇರಿದಂತೆ ಐವರು ಶುಕ್ರವಾರ ಮೃತಪಟ್ಟಿದ್ದಾರೆ.

ಮೃತಪಟ್ಟವರು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದವರು.

ಡಾ. ಸಂತೋಷ್ (36), ಡಾ. ಅರ್ಚನಾ (34), ಪುತ್ರಿ  ಲಕ್ಷ್ಮಿ (1) ಹಾಗೂ ಸಂತೋಷ್‌ ಅವರ ತಂದೆ ಸಿದ್ದರಾಮಪ್ಪ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಲೀಲಾವತಿ, ಚಿಕಿತ್ಸೆಗೆ ಸ್ಪಂದಿಸದೇ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ಅಸುನೀಗಿದರು. ಇನ್ನೊಬ್ಬ ಪುತ್ರ ತನುಷ್‌ಗೆ (3) ಗಾಯಗಳಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.