ಮುನಿರತ್ನಗೆ ಟಿಕೆಟ್: ಕಾಂಗ್ರೆಸ್‌ ಮುಖಂಡರ ವಿರೋಧ

7

ಮುನಿರತ್ನಗೆ ಟಿಕೆಟ್: ಕಾಂಗ್ರೆಸ್‌ ಮುಖಂಡರ ವಿರೋಧ

Published:
Updated:

ಬೆಂಗಳೂರು: ‘ರಾಜರಾಜೇಶ್ವರಿನಗರದಲ್ಲಿ ಶಾಸಕ ಮುನಿರತ್ನ ಅವರಿಗೆ ಟಿಕೆಟ್ ಕೊಡಬಾರದು’ ಎಂದು ಕಾಂಗ್ರೆಸ್‌ ಮುಖಂಡ ಹನುಮಂತರಾಯಪ್ಪ ಆಗ್ರಹಿಸಿದರು.

ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪಕ್ಷಕ್ಕಾಗಿ ದುಡಿದವರ ವಿರುದ್ಧ ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಜಾತಿನಿಂದನೆ ಪ್ರಕರಣ ದಾಖಲಿಸಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅವರಿಗೆ ಟಿಕೆಟ್ ಕೊಟ್ಟರೆ ಪಕ್ಷದ ವರ್ಚಸ್ಸು ಹಾಳಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುನಿರತ್ನ ಅವರ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಹೀಗಿದ್ದರೂ ಟಿಕೆಟ್ ಕೊಟ್ಟಿರುವುದು ಖಚಿತವಾದರೆ ನಾವು ಇದನ್ನು ವಿರೋಧಿಸುತ್ತೇವೆ’ ಎಂದರು.

ಬಿಬಿಎಂಪಿ ಸದಸ್ಯೆ ಆಶಾ ಸುರೇಶ್‌, ಮುಖಂಡರಾದ ಲಗ್ಗೆರೆ ಶಿವಣ್ಣ, ಗೋವಿಂದರಾಜು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry