ಶುಕ್ರವಾರ, ಡಿಸೆಂಬರ್ 13, 2019
19 °C

ಕಠುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ: ವಿಶ್ವಸಂಸ್ಥೆ

ಪಿಟಿಐ Updated:

ಅಕ್ಷರ ಗಾತ್ರ : | |

ಕಠುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ: ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಜಮ್ಮು–ಕಾಶ್ಮೀರದ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಬಾಲಕಿ ಮೇಲೆ ನಡೆದ ಕೃತ್ಯದ ಭಯಾನಕತೆಯನ್ನು ಮಾಧ್ಯಮಗಳಿಂದ ನಾವು ತಿಳಿದಿದ್ದೇವೆ. ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿ ನ್ಯಾಯ ಸಿಗಲಿದೆ ಎಂಬ ಸಂಪೂರ್ಣ ಭರವಸೆ ಇದೆ ಎಂದು ಗುಟೆರಸ್‌ ತಿಳಿಸಿದ್ದಾರೆ’ ಎಂದು ಮಹಾಪ್ರಧಾನ ಕಾರ್ಯದರ್ಶಿ ಕಚೇರಿಯ ವಕ್ತಾರರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:

ಅಲೆಮಾರಿಗಳ ಓಡಿಸಲು ಬಾಲಕಿ ಮೇಲೆ ಅತ್ಯಾಚಾರ

ಪ್ರತಿಕ್ರಿಯಿಸಿ (+)