ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಶುಕ್ರವಾರ, ಮಾರ್ಚ್ 22, 2019
28 °C

ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Published:
Updated:
ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಚಾಮರಾಜನಗರ: ಇಲ್ಲಿನ ಸೋಮವಾರ ಪೇಟೆ ಬಳಿ ಕಾರು ಮತ್ತು ಲಾರಿ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಮುಸುಕಿನ ಜೋಳ ತುಂಬಿದ ಲಾರಿ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಚಾಲಕ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರು ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಕೂಳೂರಗಿ ಗ್ರಾಮದ ಮೂಲದವರು. ಇವರು ತಮಿಳುನಾಡು ಪ್ರವಾಸ ಮುಗಿಸಿ ವಾಪಸ್ಸಾಗುವ ವೇಳೆ ರಸ್ತೆ ಬದಿ ಕಾರು ನಿಲ್ಲಿಸಿ ಎಳನೀರು ಕುಡಿಯುತ್ತಿದ್ದರು. ಈ ಸಮಯದಲ್ಲಿ ತಮಿಳುನಾಡಿಗೆ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ಕಾರಿನ ಮೇಲೆ ಬಿದ್ದು ಅವಘಡ ಸಂಭವಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry