ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ ರಾಜೀನಾಮೆ

ಮಂಗಳವಾರ, ಮಾರ್ಚ್ 26, 2019
33 °C
ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ ರಾಜೀನಾಮೆ

ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ ರಾಜೀನಾಮೆ

Published:
Updated:
ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಸುದರ್ಶನ್‌ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ವಿ.ಆರ್‌.ಸುದರ್ಶನ್‌ ಶನಿವಾರ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರಿಗೆ ಮೊಬೈಲ್‌ ಫೋನ್‌ ಮೂಲಕ ರಾಜೀನಾಮೆ ಸಂದೇಶ ಕಳುಹಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಬಯಸಿದ್ದರು. ಆದರೆ ಟಿಕೆಟ್‌ ಸಿಗುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ನಿರಾಶರಾಗಿದ್ದ ಅವರು ಈ ಕುರಿತು ಆಪ್ತ ವಲಯದಲ್ಲಿ ಬೇಸರ ತೋಡಿಕೊಂಡಿದ್ದರು.

1978ರಲ್ಲಿ ವೇಮಗಲ್‌ ಗ್ರಾಮಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದ ಸುದರ್ಶನ್‌, 1988ರಿಂದ 2006ರವರೆಗೆ ಮೂರು ಅವಧಿಗಳಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಪರಿಷತ್‌ ಉಪಸಭಾಪತಿ ಹಾಗೂ ಸಭಾಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry